ಮುಂಬೈ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಪಿಟಿಐ ಮೂಲಗಳು ಗುರುವಾರ ತಿಳಿಸಿವೆ.
ಇದನ್ನೂ ಓದಿ: ಹರಿಯಾಣ ಚುನಾವಣೆಗೆ ಕಾಂಗ್ರೆಸ್ ಪಕ್ಷ 89 ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆ; ಸಿಪಿಐ(ಎಂ) 1 ಸ್ಥಾನ
ಹೃದಯದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 78 ವರ್ಷದ ಲಾಲು ಪ್ರಸಾದ್ ಯಾದವ್ ಅವರು ನಿನ್ನೆ ( ಸೆಪ್ಟೆಂಬರ್ 10) ಇಲ್ಲಿನ ಏಷ್ಯನ್ ಆಸ್ಪತ್ರೆಗೆ ದಾಖಲಾಗಿದ್ದರು.
ಹೃದ್ರೋಗ ತಜ್ಞರ ಸಲಹೆ ಮೇರಿಗೆ ಅವರು ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ಯಾದವ್ ಅವರಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮಾಜಿ ಸಿಎಂ ಲಾಲು ಪ್ರಸಾದ್ ಅವರು ಹೃದಯ ಖಾಯಿಲೆಗೆ ಸಂಬಂಧಿಸಿದಂತೆ 2014,2018 ಮತ್ತು 2023ರಲ್ಲೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಗುಣಮುಖರಾಗಿದ್ದರು.
ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರು ಈಗಾಗಲೇ ಸಿಂಗಾಪುರದಲ್ಲಿ ಕಿಡ್ನಿ ಕಸಿ ಮಾಡಿಸಿಕೊಂಡಿದ್ದಾರೆ. ಯಾದವ್ ಅವರಿಗೆ ಅವರ ಪುತ್ರಿಯೇ ಕಿಡ್ನಿ ದಾನ ಮಾಡಿದ್ದರು. ಅವರ ಅನಾರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಲಾಲು ಪ್ರಸಾದ್ ಯಾದವ್ ಅವರಿಗೆ ಚಿಕಿತ್ಸೆಗೆ ಅವಕಾಶ ನೀಡಿದ್ದು, ಅದರ ಆಧಾರದ ಮೇಲೆ ಅವರು ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗಣೇಶ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ; ಪೊಲೀಸ್ ಠಾಣೆ ಎದುರು ಹಿಂದೂಗಳಿಂದ ಪ್ರತಿಭಟನೆ