More

    ನಾಯಕತ್ವ ತರಬೇತಿ ಶಿಬಿರದಲ್ಲಿ ಮಿಂಚಿದ ಕಾಮರ್ಸ್ ಕಾಲೇಜ್ ವಿದ್ಯಾರ್ಥಿಗಳ ಲಂಬಾಣಿ ನೃತ್ಯ.

    ಗದಗ: ನಗರದ ಆದರ್ಶ ಶಿಕ್ಷಣ ಸಂಸ್ಥೆಯ ಶ್ರೀ ವಿ ಆರ್ ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್ ನ ಕಲಾವಿಭಾಗದ ವಿದ್ಯಾರ್ಥಿಗಳು ರೋಣದಲ್ಲಿ ನಡೆದ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಧಾರವಾಡ  ರಾಜೀವ್ ಗಾಂಧಿ ಸಂಸ್ಥೆಯ ಶಿಕ್ಷಣ  ಮಹಾವಿದ್ಯಾಲಯ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ನೃತ್ಯ ಪ್ರದರ್ಶನ ನೀಡಿದರು. ಕರ್ನಾಟಕ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶದ ಮುಖ್ಯಸ್ಥರಾದ ಡಾ. ಎಂ ಬಿ ದಳಪತಿ ಅವರು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಒಂದೊಂದು ಕಲೆ ಇರುತ್ತದೆ ಆ ಕಲೆಯನ್ನ ವ್ಯಕ್ತಪಡಿಸಲು ಒಂದು ಸೂಕ್ತವಾದ ವೇದಿಕೆ ಹಂಬಲಿಸುತ್ತ ಇರುತ್ತದೆ ಅಂತ ಒಂದು ವೇದಿಕೆಗೆ ವಿಶ್ವವಿದ್ಯಾಲಯ ಮಟ್ಟದ ನಾಯಕತ್ವ ತರಬೇತಿ ಶಿಬಿರ ಈ ಒಂದು ನಾಯಕತ್ವ ಶಿಬಿರದಲ್ಲಿ ಸ್ವಯಂಸೇವಕರು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಂಡು ನಾಡಿನಲ್ಲಿ ಉತ್ತಮ ನಾಯಕರಾಗಿ ಬೆಳೆಯಬೇಕು ಅಷ್ಟೇ ಅಲ್ಲದೆ ವಿದ್ಯಾರ್ಥಿಗಳು ಪಾಶ್ಚಿಮಾತ್ಯ ನೃತ್ಯಗಳಿಗೆ ಮಾರುಹೋಗದೆ ನಮ್ಮ ಕರ್ನಾಟಕದ ಲಂಬಾಣಿ ನೃತ್ಯ ಜನಪದ ನೃತ್ಯ ಕೋಲಾಟ ನಾಟಕಗಳು ಇವುಗಳ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸುವುದು ರೊಂದಿಗೆ ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ತಮ್ಮ ಮಾತುಗಳಲ್ಲಿ ಹಂಚಿಕೊಂಡರು. 

    ರಾಜು ಗಾಂಧಿ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಕಾರ್ಯಕ್ರಮ ಅಧಿಕಾರಿಗಳಾದ ಪ್ರೊ. ಹೆಚ್ ಆರ್ ದೊಡ್ಮನೆ ಅವರು ಮಾತನಾಡಿ ಗದುಗಿನ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಬಹಳ ಲಂಬಾಣಿ ನೃತ್ಯ ಪ್ರದರ್ಶನ ನೀಡಿದ್ದಾರೆ ಇಂತಹ ಕಲೆಗಳು ಉಳಿದರೆ ನಮ್ಮ ಸಂಸ್ಕೃತಿ ಉಳಿದ ಹಾಗೆ ಎಂದು ತಮ್ಮ ಮಾತುಗಳಲ್ಲಿ ಹಂಚಿಕೊಂಡರು ಈ ತಂಡದ ನಿರ್ದೇಶಕರಾದ ಪ್ರೊ ಬಾಹುಬಲಿ ಪಿ ಜೈನರವರಿಗೆ ಸನ್ಮಾನ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಯುವ ನಾಯಕರು ಶ್ರೀ ಮಿಥುನ್ ಪಾಟೀಲ್, ಬಿ ಎಡ್ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ ವೈ ಎನ್ ಪಾಪಣ್ಣವರ, ಪ್ರೊಫೆಸರ್ ಪ್ರವೀಣ್ ಚಪ್ಪರಮನಿ ಡಾ. ವಿ ವೈ ಹಿರೇಮಠ್ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳು ಹಾಗೂ ಸ್ವಯಂಸೇವಕ ಸೇವಕಿಯರು ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts