ಆದ್ಯತೆಯಲ್ಲಿ ಬಡವರಿಗೆ ಭೂಮಿ: ಸಚಿವ ದಿನೇಶ್​ ಗುಂಡೂರಾವ್​ ಹೇಳಿಕೆ

Mbd_Hakku Patra
Published on

ವಿಜಯವಾಣಿ ಸುದ್ದಿಜಾಲ ಮೂಡುಬಿದಿರೆ

ದೇವರಾಜ ಅರಸು ಸರ್ಕಾರವು ಭೂಮಿಯಿಲ್ಲದ ಜನರಿಗೆ ಜಮೀನ್ದಾರ ಭೂಮಿಯನ್ನು ಕಾನೂನಾತ್ಮಕವಾಗಿ ಹಂಚಿದ್ದರಿಂದ ಕ್ರಾಂತಿಕಾರಿ ಬದಲಾವಣೆಯಾಗಿದೆ. ಗುಂಡೂರಾವ್​ ಆಡಳಿತಾವಧಿಯಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಯಿತು. ಸಿದ್ದರಾಮಯ್ಯ ಸರ್ಕಾರ ಬಡವರಿಗೆ ಭೂಮಿ ನೀಡುವುದನ್ನು ಆದ್ಯತೆಯಾಗಿ ಪರಿಗಣಿಸಿದೆ. ಇದರಿಂದ ಬಡವರ ಬದುಕು ಹಸನಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

ಮೂಡುಬಿದಿರೆ ಸಮಾಜ ಮಂದಿರದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕಂದಾಯ ಇಲಾಖೆ ವತಿಯಿಂದ ಮೂಡುಬಿದಿರೆ ತಾಲೂಕಿನ ಅರ್ಹ 334 ಮಂದಿ ಫಲಾನುಭವಿಗಳಿಗೆ 94ಸಿ ಮತ್ತು 94ಸಿಸಿಯಡಿ ಹಕ್ಕುಪತ್ರ ವಿತರಿಸಿ ಮಾತನಾಡಿದರು.

ಶಾಸಕ ಉಮಾನಾಥ ಕೋಟ್ಯಾನ್​ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿಂದಿನ ಸರ್ಕಾರದ ಅವಧಿಯಲ್ಲಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಮಂದಿಗೆ ಹಕ್ಕುಪತ್ರ ನೀಡಲಾಗಿತ್ತು. ಈಗ ಉಳಿದವರಿಗೆ ಹಕ್ಕುಪತ್ರ ನೀಡಲಾಗಿದೆ. ಅಧಿಕಾರಿಗಳೊಂದಿಗೆ ನಿರಂತರ ಸಭೆ ನಡೆಸಿ ಖುದ್ದು ಫಲಾನುಭವಿಗಳನ್ನು ಭೇಟಿಯಾಗಿ ತಾರತಮ್ಯವಿಲ್ಲದೆ ಹಕ್ಕುಪತ್ರ ವಿತರಿಸಲಾಗಿದೆ ಎಂದರು.

ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್​, ಉಪಾಧ್ಯಕ್ಷ ನಾಗರಾಜ್​ ಪೂಜಾರಿ, ಮುಡಾ ಅಧ್ಯಕ್ಷ ಹರ್ಷವರ್ದನ್​ ಪಡಿವಾಳ್​, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್​ ಕುಮಾರ್​ ಶೆಟ್ಟಿ, ತಹಸೀಲ್ದಾರ್​ ಪ್ರದಿಪ್​ ಕುರ್ಡೇಕೆರ್​, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕುಸುಮಾ ಮಾಧವ ಉಪಸ್ಥಿತರಿದ್ದರು. ತಹಸೀಲ್ದಾರ್​ ಪ್ರದಿಪ್​ ಕುರ್ಡೇಕೆರ್​ ಸ್ವಾಗತಿಸಿದರು. ನವೀನ್​ ಅಂಬೂರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net