More

    ಭೂಮಿ ನೀಡಿದರೆ ತಕ್ಷಣ ಕಾಮಗಾರಿ – ಸಚಿವ ಸುರೇಶ ಅಂಗಡಿ

    ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣ ಸಂಬಂಧ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ.

    ಡಶನಿವಾರ ಡಿಸಿ ಕಚೇರಿಯಲ್ಲಿ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 142 ಕಿ.ಮೀ. ಉದ್ದದ ರೈಲು ಮಾರ್ಗಕ್ಕೆ ಸುಮಾರು ಎರಡು ಸಾವಿರ ಎಕರೆ ಭೂಮಿ ಅಗತ್ಯವಿದೆ. ಈ ಪೈಕಿ ಅರ್ಧದಷ್ಟು ಪ್ರದೇಶವನ್ನು ಸ್ವಾಧೀನಪಡಿಸಿ ಕೊಳ್ಳಲಾಗಿದೆ.

    ಬಾಕಿ 1,106 ಎಕರೆ ಭೂಸ್ವಾಧೀನ ಆಗಬೇಕಿದೆ. ಬಾಗಲಕೋಟೆ-ಖಜ್ಜಿಡೋಣಿವರೆಗೆ 32 ಕಿ.ಮೀ. ಮಾರ್ಗ ಪೂರ್ಣಗೊಂಡಿದೆ. ಉಳಿದ ಮಾರ್ಗಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್, ಹಣ ಬಿಡುಗಡೆ ಪ್ರಕ್ರಿಯೆ ಸುಗಮವಾಗಲಿದೆ. ಆದ್ದರಿಂದ ಬಾಕಿ ಭೂಸ್ವಾಧೀನ ಪ್ರಕ್ರಿಯೆ ತಕ್ಷಣ ಆರಂಭಿಸುವಂತೆ ಉಭಯ ಜಿಲ್ಲೆಗಳ ಡಿಸಿಗಳಿಗೆ ನಿರ್ದೇಶನ ನೀಡಿರುವು ದಾಗಿ ಹೇಳಿದರು. ಸಂಪೂರ್ಣ ಜಮೀನು ಒದಗಿಸುವುದು, ಕಾಮಗಾರಿಯ ಶೇ.50 ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕಿದೆ ಎಂದು ತಿಳಿಸಿದರು. ಸಂಸದ ಪಿ.ಸಿ.ಗದ್ದಿಗೌಡರ್, ಶಾಸಕರಾದ ಡಿ.ಎಂ. ಐಹೊಳೆ, ವೀರಣ್ಣ ಚರಂತಿಮಠ, ಸಿದ್ದು ಸವದಿ ಇದ್ದರು.\

    213 ಎಕರೆ ಭೂಮಿ ಇಲಾಖೆಗೆ ಹಸ್ತಾಂತರ: ಇದಕ್ಕೂ ಮೊದಲು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸಚಿವ ಸುರೇಶ ಅಂಗಡಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲಾಧಿಕಾರಿಗಳು ಯೋಜನೆಯ ಸ್ಥಿತಿಗತಿಯ ಮಾಹಿತಿ ನೀಡಿದರು. ಡಿಸಿ ಎಂ.ಜಿ. ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ 213 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಉಳಿದ 236 ಎಕರೆ ಪೈಕಿ 28 ಎಕರೆಗೆ ತಡೆಯಾಜ್ಞೆ ಇದೆ.

    ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ಮುಖ್ಯಕಾರ್ಯದರ್ಶಿಗಳು ವಿಡಿಯೋ ಸಂವಾದ ಏರ್ಪಡಿಸಲಿದ್ದು, ಭೂಸ್ವಾಧೀನ ಸೇರಿದಂತೆ ಬಾಕಿ ಉಳಿದಿರುವ ಕಾಮಗಾರಿಗಳ ಕುರಿತು ಗಮನ ಸೆಳೆದು ಪ್ರಕ್ರಿಯೆ ಚುರುಕುಗೊಳಿಸಲಾಗುವುದು ಎಂದರು. ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಮಾತನಾಡಿ, 114 ಎಕರೆ ಭೂಸ್ವಾಧೀನ ಪ್ರಕ್ರಿಯೆ ಇದೀಗ ಆರಂಭಿಸಲಾಗಿದೆ. 200 ಕೋಟಿ ರೂ. ಅನುದಾನ ಒದಗಿಸಿದರೆ ತಕ್ಷಣ ಭೂಸ್ವಾಧೀನ ಸಾಧ್ಯವಾಗಲಿದೆ ಎಂದು ಸಚಿವರ ಗಮನಕ್ಕೆ ತಂದರು. ರೈಲ್ವೆ ಇಲಾಖೆಯ ಮುಖ್ಯ ಇಂಜಿನಿಯರ್ ಪ್ರೇಮ ನಾರಾಯಣ, ಎಸಿ ಶಿವಾನಂದ ಭಜಂತ್ರಿ ಇದ್ದರು.

    ಯೋಜನೆಗೆ ಈಗಾಗಲೇ ತಡವಾಗಿದೆ. ಲಭ್ಯವಿರುವ ಅನುದಾನ ಬಳಸಿಕೊಂಡು ಭೂಸ್ವಾಧೀನ ಪ್ರಕ್ರಿಯೆ ಆರಂಭಿಸುವ ಅಗತ್ಯವಿದೆ. ಇಲಾಖೆಯಿಂದ ಭೂಸ್ವಾಧೀನ ಹಾಗೂ ಇನ್ನಿತರ ಪ್ರಕ್ರಿಯೆಗಳಿಗೆ ಹಣ ಬಿಡುಗಡೆಗೆ ಸೂಚಿಸಲಾಗಿದೆ.
    | ಎ.ಕೆ. ಸಿಂಗ್ ನೈಋತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts