More

    ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಜಮೀನು ಖರೀದಿ ಪ್ರಕ್ರಿಯೆ ಆರಂಭಿಸಿ

    ಹಿರೇಬಾಗೇವಾಡಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಜಮೀನು ನೀಡಲು ರೈತರು ತಯಾರಾಗಿದ್ದಾರೆ. ಶೀಘ್ರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ರಾಚವಿವಿ ಅಭಿವೃದ್ಧಿ ಪರ ಹೋರಾಟ ಸಮಿತಿ ಆಗ್ರಹಿಸಿದೆ.

    ಇತ್ತೀಚೆಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರಿಗೆ ಮನವಿ ಸಲ್ಲಿಸಿದ ಸಂಚಾಲಕ ಮಂಜುನಾಥ ವಸ್ತ್ರದ ಮಾತನಾಡಿ, ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಶೈಕ್ಷಣಿಕ ಕಾರ್ಯವ್ಯಾಪ್ತಿ ಹೊಂದಿರುವ ಆರ್‌ಸಿಯು ಗಡಿಭಾಗದ ಹೆಮ್ಮೆಯ ಪ್ರತೀಕವಾಗಿದೆ.

    ಯುವ ಸಮೂಹ ಮತ್ತು ರೈತಾಪಿ ವರ್ಗದ ಜನರು ಈ ಭಾಗದಲ್ಲಿ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿ ಪರವಾದ ನಿಲುವಿಗೆ ಸದಾ ಬೆಂಬಲವಾಗಿ ನಿಂತಿದ್ದು, ಹಿರೇಬಾಗೇವಾಡಿ ಗುಡ್ಡದ ಮಲ್ಲಪ್ಪನ ಬಳಿಯ ತಮ್ಮ ಜಮೀನನ್ನು ವಿವಿಗೆ ನೀಡಲು ಮುಂದೆ ಬಂದಿದ್ದಾರೆ.

    ಈ ಕುರಿತು ವಿವಿ ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ, ಕುಲಸಚಿವ ಬಸವರಾಜ ಪದ್ಮಶಾಲಿ, ವಿವಿ ಹಿರಿಯ ಅಧಿಕಾರಿಗಳು ಮತ್ತು ರೈತರೊಂದಿಗೆ ನಡೆದ ಕಾರ್ಯಕ್ರಮದಲ್ಲಿ ರೈತರು ತಮ್ಮ ಜಮೀನನ್ನು ವಿವಿಗೆ ನೀಡಲು ಒಪ್ಪಿಗೆ ನೀಡಿದ್ದಾರೆ. ಜಮೀನು ಖರೀದಿಗೆ ಜಿಲ್ಲಾಡಳಿತ ಶೀಘ್ರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬಸವಣ್ಣಿಪ್ಪ ಗಾಣಿಗಿ, ಪರವೇಜ ದೇವಲಾಪುರ, ಯಾಕೂಬ ದೇವಲಾಪುರ, ಸಿದ್ಧಾರೂಢ ಹೊನ್ನಣ್ಣವರ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts