More

    ಭೂ ಸುಧಾರಣೆ ಕಾಯ್ದೆ ಕೈ ಬಿಡಲು ಆಗ್ರಹ

    ಗೋಕಾಕ: ಭೂ ಸುಧಾರಣಾ ಕಾಯ್ದೆ ಕೈ ಬಿಡುವಂತೆ ಆಗ್ರಹಿಸಿ ನಗರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿವಾಸಕ್ಕೆ ಗುರುವಾರ ಮುತ್ತಿಗೆ ಹಾಕಲು ಯತ್ನಿಸಲಾಯಿತು. ಪ್ರತಿಭಟನಾ ಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

    ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ರೈತರು ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ರೈತರ ಪಾಲಿಗೆ ಮರಣ ಶಾಸನವಾಗಿರುವ ಭೂ ಸುಧಾರಣೆ ಕಾಯ್ದೆ ಕೈ ಬಿಡುವಂತೆ ಅಗ್ರಹಿಸಿ ದರು. ರೈತರು ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ ಒಂದು ಗಂಟೆಗೂ ಅಧಿಕ ಕಾಲ ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು. ಸಚಿವರ ಮನೆಗೆ ನುಗ್ಗಲು ಯತ್ನಿಸುತ್ತಿದ್ದ ಪ್ರತಿಭಟನಾಕಾರರನ್ನು ತಡೆಯಲು ಸ್ಥಳೀಯ ಠಾಣೆ ಪೊಲೀಸರು ಹರಸಾಹಸಪಟ್ಟರು. ನಂತರ ಧರಣಿ ನಿರತ ರೈತರು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

    ಈರಣ್ಣ ಅಂಗಡಿ, ಗೋಪಾಲ ಬಾಳಿಕಟ್ಟಿ, ಶ್ರೀಶೈಲ ಅಂಗಡಿ, ಮಲ್ಲಪ್ಪ ಅಂಗಡಿ, ಎಸ್.ಆರ್.ಪೂಜಾರಿ, ಲಕ್ಷ್ಮಣ ತೋಳಮರಡಿ, ಕೆಂಪಣ್ಣ ಅವರಾದಿ, ರಾಮಪ್ಪ ಡಬಾಜ, ಬಿ.ಎಂ.ಸಸಾಲಟ್ಟಿ ಇತರರು ಇದ್ದರು.

    ಚನ್ನಮ್ಮನ ಕಿತ್ತೂರು ವರದಿ: ಬೆಂಗಳೂರಿನಲ್ಲಿ ನಡೆದ ಗಲಭೆಗೆ ಕಾರಣರಾದವರನ್ನು ಬಂಧಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿಯ ಕಿತ್ತೂರು ಮಂಡಳದ ವತಿಯಿಂದ ಗುರುವಾರ ತಹಸೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

    ಕ್ಷುಲಕ ಕಾರಣಕ್ಕೆ ದಾಂಧಲೆ ಎಬ್ಬಿಸಿ ಶಾಸಕರ ಮನೆ ಹಾಗೂ ಪೊಲೀಸ್ ಠಾಣೆ ಗುರಿಯಾಗಿಸಿಟ್ಟುಕೊಂಡು ಕೃತ್ಯ ಎಸಗಲಾಗಿದೆ. ಇಂತಹ ಘಟನೆ ಗಳಿಗೆ ಪ್ರಚೋದನೆ ನೀಡುತ್ತಿರುವ ಸಂಘಟನೆಗಳನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು. ಬೋಗೂರ ಗ್ರಾಮದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

    ಸಂದೀಪ ದೇಶಪಾಂಡೆ, ಉಮಾದೇವಿ ಬಿಕ್ಕಣ್ಣವರ, ಕಿರಣ ಪಾಟೀಲ, ವಿಶ್ವನಾಥ ಬಿಕ್ಕಣ್ಣವರ, ಉಳವಪ್ಪ ಉಳ್ಳಾಗಡ್ಡಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts