ರಾಣೆಬೆನ್ನೂರ: ಜಮೀನು ಮಾರಾಟ ಮಾಡಿದ್ದರಿಂದ ಮನಸ್ಸಿಗೆ ಬೇಜಾರು ಮಾಡಿಕೊಂಡ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಕನೂರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಧರ್ಮಣ್ಣ ಕೋಟ್ರಪ್ಪ ತಳವಾರ (55) ಮೃತ ವ್ಯಕ್ತಿ.
ಇವರು ತಮ್ಮ ಜಮೀನು ಮಾರಾಟ ಮಾಡಿದ ಸಲುವಾಗಿ ಮನಸ್ಸಿಗೆ ಬೇಜಾರು ಮಾಡಿಕೊಂಡು ಗ್ರಾಮದ ಗೋಮಾಳ ಜಾಗದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
