ಬೇವಿಂಜೆಯಲ್ಲಿ ಭೂಕುಸಿತ

Landslide
Published on

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಬೇವಿಂಜದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ರಸ್ತೆಯ ಕೆಳಗಡೆ ವಾಸಿಸುತ್ತಿದ್ದ ಎರಡು ಮನೆಗಳ ಬಾವಿ, ಕೊಳಗಳು ಮಣ್ಣು ಪಾಲಾಗಿವೆ. ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಮನೆಗಳಿಗೆ ಕುಡಿಯುವ ನೀರು ಪೂರೈಸಲು ಹಾಗೂ ಕುಡಿಯುವ ನೀರಿನ ಮೂಲಗಳನ್ನು ಸ್ವಚ್ಛಗೊಳಿಸುವಂತೆ ನಿರ್ಮಾಣ ಸಂಸ್ಥೆಗೆ ಸೂಚಿಸಿದೆ. ರಸ್ತೆಯ ಒಂದು ಭಾಗದಲ್ಲಿ ಭೂಕುಸಿತದಿಂದಾಗಿ ದೊಡ್ಡ ವಾಹನಗಳು ಪ್ರವೇಶಿಸುವುದನ್ನು ತಡೆಯಲಾಯಿತು. ಭೂ ಕುಸಿತದ ನಂತರ ರಸ್ತೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಿರ್ಮಾಣ ಕಂಪನಿ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಂಜೇಶ್ವರ ತಾಲೂಕಿನ ಕಣ್ವತೀರ್ಥದಲ್ಲಿ ಕಡಲ್ಕೊರೆತ ತೀವ್ರವಾಗಿದೆ ಎಂದು ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net