More

    ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ: 2 ಮನೆ ಮಣ್ಣುಪಾಲು, ಐವರು ನಾಪತ್ತೆ, 20 ಹಸುಗಳ ಸಾವು

    ಮಡಿಕೇರಿ: ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಸಾವು-ನೋವಿನ ಪ್ರಮಾಣ ಹೆಚ್ಚಾಗುತ್ತಲೇ ಇದೆ.

    ಭೂಕುಸಿತದಿಂದಾಗಿ ಎರಡು ಮನೆಗಳು ಮಣ್ಣುಪಾಲಾಗಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್ ಮತ್ತು ಅವರ ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ಸೇರಿ ನಾಲ್ವರು ನಾಪತ್ತೆಯಾಗಿದ್ದಾರೆ. 20ಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಎರಡು ಕಾರು ಸಂಪೂರ್ಣ ಜಖಂ ಆಗಿದೆ. ಅಚ೯ಕರ ಕುಟುಂಬದ ಪತ್ತೆಗಾಗಿ ಸ್ಥಳೀಯರು ಹರಸಾಹಸ ಪಡುತ್ತಿದ್ದು, ಪ್ರಾಣಾಪಾಯ ಸಂಭವಿಸದಿರಲಿ ಎಂದು ಪ್ರಾರ್ಥಿಸಿದ್ದಾರೆ.ಅರ್ಚಕರ ಕುಟುಂಬ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು. ಅವರ ಪತ್ತೆಗಾಗಿ ಕಾಯಾ೯ಚರಣೆ ಮುಂದುವರಿದಿದೆ.

    ಇದನ್ನೂ ಓದಿರಿ ಭಾರೀ ಮಳೆಗೆ ರೈಲು ಹಳಿ ಮೇಲೆ ಗುಡ್ಡ ಕುಸಿತ

    ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ: 2 ಮನೆ ಮಣ್ಣುಪಾಲು, ಐವರು ನಾಪತ್ತೆ, 20 ಹಸುಗಳ ಸಾವು
    ಬೇತ್ರಿ ಸೇತುವೆಯಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದೆ.

    ತಲಕಾವೇರಿಯಲ್ಲಿ ಸುಮಾರು 6 ಕಿ.ಮೀ. ಉದ್ದಕ್ಕೆ ಬೆಟ್ಟಸಾಲು ಕುಸಿದು ಬಿದ್ದಿದ್ದು, ಅಪಾರ ಪ್ರಾಣಿ ಹಾನಿ ಸಂಭವ ಹೆಚ್ಚಿದೆ. ಮಂಜು ಕವಿದ ವಾತಾವರಣ ಮತ್ತು ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾಯಾ೯ಚರಣೆಗೆ ತೊಡಕುಂಟಾಗಿದೆ. ಭಾಗಮಂಡಲ- ತಲಕಾವೇರಿ ರಸ್ತೆಯ ಅಲ್ಲಲ್ಲಿ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾಯ೯ಪಡೆಯ ವಾಹನಗಳು ಸ್ಥಳಕ್ಕೆ ತೆರಳಲು ಅಟ್ಟಿಯಾಗುತ್ತಿದೆ.

    ‘ಇನ್ನು ಮಡಿಕೇರಿ- ವಿರಾಜಪೇಟೆ ಮಾರ್ಗದ ಬೇತ್ರಿ ಸೇತುವೆಯಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದ್ದು, ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಜಿಲ್ಲಾಡಳಿತ ನಿಷೇಧಿಸಿದೆ.

    ಮಳೆ ಫಜೀತಿ ಪ್ರವಾಹ ಭೀತಿ: ಕೊಡಗು, ಕರಾವಳಿ, ಮಲೆನಾಡಿನಲ್ಲಿ ಧಾರಾಕಾರ ಮಳೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts