ಯಲ್ಲಾಪುರ: ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಶುಕ್ರವಾರವೂ ಮುಂದುವರಿದಿದೆ. ವಜ್ರಳ್ಳಿ ಗ್ರಾ.ಪಂ. ವ್ಯಾಪ್ತಿಯ ಬೀಗಾರ- ಕಳಚೆ ರಸ್ತೆಯಲ್ಲಿ ಮಣ್ಣು ಕುಸಿತ ಉಂಟಾಗಿದ್ದು, ದೊಡ್ಡ ವಾಹನಗಳ ಓಡಾಟ ನಿಷೇಧಿಸಲಾಗಿದೆ. ದ್ವಿಚಕ್ರ ವಾಹನಗಳ ಓಡಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಮಣ್ಣು ಕುಸಿತ ಉಂಟಾದ ಪ್ರದೇಶಕ್ಕೆ ಜಿ.ಪಂ. ಅಧಿಕಾರಿಗಳು ಭೇಟಿ ನೀಡಿ, ತಡೆ ಬೇಲಿ ನಿರ್ವಿುಸಿ ದೊಡ್ಡ ವಾಹನಗಳ ಓಡಾಟ ನಿಷೇಧಕ್ಕೆ ಕ್ರಮ ಕೈಗೊಂಡಿದ್ದಾರೆ. ಪಟ್ಟಣದ ಸವಣಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಕುಸಿದು ಬಿದ್ದು ಹಾನಿಯಾಗಿದೆ.