blank

ಹೊಸನಗರ, ಸಾಗರದಲ್ಲಿ ಭೂಕುಸಿತದ ಭೀತಿ

tunga

ಶಿವಮೊಗ್ಗ: ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಮಳೆಯಿಂದ ಅನಾಹುತಗಳೂ ಹೆಚ್ಚುತ್ತಿವೆ. ಆನಂದಪುರ ಸುತ್ತಮುತ್ತಲು ಮಳೆ ಹಾಗೂ ಗಾಳಿಯ ರಭಸಕ್ಕೆ ಹಲವು ವಿದ್ಯುತ್ ಕಂಬಗಳು ಧರೆಗುರುಳಿವೆ. ಹೊಸನಗರ ಹಾಗೂ ಸಾಗರ ತಾಲೂಕಿನ ವಿವಿಧೆಡೆ ಭೂಕುಸಿತದ ಭೀತಿ ಎದುರಾಗಿದೆ.

ಮಂಗಳವಾರ ಬೆಳಗ್ಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸನಗರ ತಾಲೂಕಿನ ಮಾಣಿ ಹಾಗೂ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹುಲಿಕಲ್, ಸಾವೆಹಕ್ಲು, ಮಾಸ್ತಿಕಟ್ಟೆ, ಯಡೂರು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದೆ.
ಜಲಾನಯನ ಪ್ರದೇಶ ವ್ಯಾಪ್ತಿಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಲಿಂಗನಮಕ್ಕಿ ಹಾಗೂ ತುಂಗಾ ಜಲಾಶಯಗಳ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಹೆಚ್ಚಳ ಕಂಡುಬಂದಿದೆ. ಭದ್ರಾ ಜಲಾಶಯದ ಒಳಹರಿವು ಉತ್ತಮವಾಗಿದೆ. ಮಂಗಳವಾರ ಬೆಳಗ್ಗೆ ಲಿಂಗನಮಕ್ಕಿ ಜಲಾಶಯದ ಒಳಹರಿವು 50 ಸಾವಿರ ಕ್ಯೂಸೆಕ್ ದಾಟಿತ್ತು. ಒಂದೇ ದಿನ ಜಲಾಶಯದಲ್ಲಿ ಸುಮಾರು ಮೂರು ಅಡಿ ನೀರು ಸಂಗ್ರಹವಾಗಿದೆ.
ಶೃಂಗೇರಿ, ಕೊಪ್ಪ, ತೀರ್ಥಹಳ್ಳಿ ಭಾಗದಲ್ಲಿ ವರ್ಷಧಾರೆ ಮುಂದುವರಿದಿರುವುದರಿಂದ ಗಾಜನೂರಿನ ತುಂಗಾ ಜಲಾಶಯಕ್ಕೆ ನಿರಂತರವಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಜಲಾಶಯಕ್ಕೆ ಬರುತ್ತಿರುವ ನೀರಿನ ಪ್ರಮಾಣದಷ್ಟೇ ಹೊರಹರಿವು ಇರುವುದರಿಂದ ಶಿವಮೊಗ್ಗದಲ್ಲಿ ಕೋರ್ಪಲಯ್ಯನ ಛತ್ರದ ಬಳಿ ಇರುವ ಮಂಟಪ ಮುಳುಗುವ ಹಂತ ತಲುಪಿದೆ. ತುಂಗಾ ನದಿಯ ರುದ್ರರಮಣೀಯ ದೃಶ್ಯ ಎಲ್ಲರನ್ನೂ ಸೆಳೆಯುತ್ತಿದೆ.
ತುಂಗಾ ಜಲಾಶಯಕ್ಕೆ 33 ಸಾವಿರ ಕ್ಯೂಸೆಕ್ ನೀರು ಹರಿದುಬರುತ್ತಿದ್ದರೆ, ಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಆರು ಸಾವಿರ ಕ್ಯೂಸೆಕ್ ದಾಟಿದೆ. ಶಿವಮೊಗ್ಗ ನಗರದಲ್ಲಿ ಜಡಿಮಳೆ ಮುಂದಿವರಿದಿದೆ.

Share This Article

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…

ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್​! Cardiac Arrest

Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…