ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಕನ್ನಡ ಜ್ಯೋತಿ ಎಲ್ಲ ಕಡೆಗೆ ಸಂಚಾರ ಮಾಡುತ್ತಿದೆ. ಕನ್ನಡ ಭಾಷೆಯ ಮಹತ್ವದ ದೃಷ್ಟಿಯಿಂದ ಇಂಥ ಕಾರ್ಯಕ್ರವು ಅಗತ್ಯ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಮಂಡ್ಯದಲ್ಲಿ ಡಿ.20ರಿಂದ 3 ದಿನ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ರಾಜ್ಯಾದ್ಯಂತ ತೆರಳುವ ಕನ್ನಡ ಜ್ಯೋತಿ ಮಂಗಳವಾರ ಕುಂದಾಪುರಕ್ಕೆ ಆಗಮಿಸಿದಾಗ ಕುಂದಾಪುರದ ಶಾಸ್ತ್ರಿ ಸರ್ಕಲ್‌ನಲ್ಲಿ ಸ್ವಾಗತಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕುಂದಾಪುರ ಸಹಾಯಕ ಕಮಿಷನರ್ ಮಹೇಶ್ಚಂದ್ರ ಕೆ., ಕುಂದಾಪುರ ತಹಸೀಲ್ದಾರ್ ಮಲ್ಲಿಕಾರ್ಜುನ, ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ಡಾ.ರವಿ, ಕಸಾಪ ಜಿಲ್ಲಾ ಸ್ಥಾಪಕಾಧ್ಯಕ್ಷ ಎ.ಎಸ್.ಎನ್.ಹೆಬ್ಬಾರ್, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ತಾಲೂಕು ಗೌರವ ಕಾರ್ಯದರ್ಶಿ ದಿನಕರ ಆರ್.ಶೆಟ್ಟಿ ಬಸ್ರೂರು, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್ ಕೆ., ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಉಮೇಶ ಕೋಟ್ಯಾನ್, ಮೆಸ್ಕಾಂ ಎಇಇ ವಿಜಯ ಕುಮಾರ್ ಶೆಟ್ಟಿ, ಉಪತಹಸೀಲ್ದಾರ್ ವಿನಯ್, ಸಮಾಜ ಕಲ್ಯಾಣ ಇಲಾಖೆಯ ರಮೇಶ ಕುಲಾಲ್, ಪುರಸಭೆ ಉಪಾಧ್ಯಕ್ಷೆ ವನಿತಾ ಬಿಲ್ಲವ, ಸದಸ್ಯ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷೆ ಗುಣರತ್ನಾ, ಮಾಜಿ ಸದಸ್ಯೆ ಪುಷ್ಪಾ ಆರ್.ಶೇಟ್, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜೆ., ಗೋಪಾಡಿ ಪಂಚಾಯಿತಿ ಅಧ್ಯಕ್ಷ ಸುರೇಶ್ ಶೆಟ್ಟಿ, ಸುಧೀರ್ ಕೆ.ಎಸ್., ರೋಹಿಣಿ ಪೈ ಇದ್ದರು.