More

    ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್​ಟ್ಯಾಪ್ ವಿತರಿಸಲು ಆಗ್ರಹಿಸಿ ಶಾಸಕರ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

    ಕೊಪ್ಪ: ಲ್ಯಾಪ್​ಟ್ಯಾಪ್ ವಿತರಣೆಯಲ್ಲಿನ ತಾರತಮ್ಯ ಖಂಡಿಸಿ ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಶಾಸಕರನ್ನು ತಡೆದು ಪ್ರತಿಭಟನೆ ನಡೆಸಿದರು.

    ಶನಿವಾರ ಬಾಳಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್​ಟ್ಯಾಪ್ ವಿತರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದಕ್ಕೆ ಆಗಮಿಸಿದ ಶಾಸಕರನ್ನು ಕಾಲೇಜು ಗೇಟ್ ಸಮೀಪ ತಡೆದ ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು ಲ್ಯಾಪ್​ಟ್ಯಾಪ್ ವಿತರಣೆಯಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಖಂಡಿಸಿ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್​ಟ್ಯಾಪ್ ವಿತರಿಸಬೇಕು. ಇಲ್ಲವಾದಲ್ಲಿ ಕಾರ್ಯಕ್ರಮ ನಡೆಸಲು ಬಿಡುವುದಿಲ್ಲ ಎಂದು ಪಟ್ಟುಹಿಡಿದರು. ಶಾಸಕರು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಲು ಯತ್ನಿಸಿದರೂ ವಿದ್ಯಾರ್ಥಿಗಳು ಪಟ್ಟು ಬಿಡದೆ ಶಾಸಕರು, ಸರ್ಕಾರದ ವಿರುದ್ಧ ಘೊಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನೆ ನಡುವೆ ಶಾಸಕರು ಸಾಂಕೇತಿಕವಾಗಿ ಲ್ಯಾಪ್​ಟ್ಯಾಪ್ ವಿತರಿಸಿ ಮಾತನಾಡಿ, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಎಸ್ಸಿ, ಎಸ್​ಟಿ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್​ಟ್ಯಾಪ್ ವಿತರಿಸಲಾಗುತ್ತಿತ್ತು. ಹೊಸ ಸರ್ಕಾರ ಅದೇ ಕಾರ್ಯಕ್ರಮವನ್ನು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್​ಟ್ಯಾಪ್ ನೀಡಲು ಮುಂದಾಗಿದೆ. ಈಗಾಗಲೇ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪ್​ಟ್ಯಾಪ್ ನೀಡಬೇಕು ಎಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ. ವಿಧಾನಸಭೆ ಅಧಿವೇಶನದಲ್ಲಿ ಲ್ಯಾಪ್​ಟ್ಯಾಪ್ ವಿತರಣೆ ಬಗ್ಗೆ ರ್ಚಚಿಸಿ ಎಲ್ಲ ವಿದ್ಯಾರ್ಥಿಗಳಿಗೂ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

    ಪ್ರಾಚಾರ್ಯ ಅನಂತ್, ಉಪನ್ಯಾಸ ಉದಯ್ಕುಮಾರ್, ವೆಂಕಟೇಶ್, ಪಪಂ ಸದಸ್ಯರಾದ ರಶೀದ್, ವಿಜಯ್ಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts