ಲ್ಯಾಪ್‌ಟಾಪ್ ವಿತರಣೆಗೆ ಎಸ್‌ಎಫ್‌ಐ ಒತ್ತಡ

ಗಂಗಾವತಿ: ಪದವಿ ಎಲ್ಲ ವಿದ್ಯಾರ್ಥಿಗಳಿಗೆ ಲ್ಯಾಪಟ್ಯಾಪ್ ಮತ್ತು ಉಚಿತ ಬಸ್ ಪಾಸ್ ಉಚಿತ ವಿತರಿಸುವಂತೆ ಒತ್ತಾಯಿಸಿ ಎಸ್‌ಎ್ಐ ತಾಲೂಕು ಸಮಿತಿ ಸದಸ್ಯರು ಶಾಸಕ ಪರಣ್ಣ ಮುನವಳ್ಳಿಗೆ ಭಾನುವಾರ ಮನವಿ ಸಲ್ಲಿಸಿದರು. ನೇತೃತ್ವ ವಹಿಸಿದ್ದ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅಮರೇಶ ಕಡಗದ್ ಮಾತನಾಡಿ, ಪದವಿ ವಿದ್ಯಾರ್ಥಿಗಳಿಗೆ ಲ್ಯಾಪಟ್ಯಾಪ್ ವಿತರಿಸಲಾಗುತ್ತಿದ್ದು, ಖರೀದಿಯಲ್ಲಿ ಹಗರಣ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ವರ್ಷ ಕಳೆದರೂ ವಿದ್ಯಾರ್ಥಿಗಳಿಗೆ ಲ್ಯಾಪಟ್ಯಾಪ್ ದೊರೆಯುತ್ತಿಲ್ಲ. ಸದನ ಸಮಿತಿ ವರದಿ ಸಲ್ಲಿಕೆಯಾಗದಿದ್ದರಿಂದ ಯೋಜನೆಗೆ ಹಿನ್ನಡೆಯಾಗಿದೆ. ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವಿತರಿಸುವ ಬಗ್ಗೆ ಹಿಂದಿನ ಸರ್ಕಾರ ಭರವಸೆ ನೀಡಿತ್ತು. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಯಾವುದೇ ಚರ್ಚೆಯಾಗಿಲ್ಲ. ಅಧಿವೇಶನದಲ್ಲಿ ಶಿಕ್ಷಣ ಯೋಜನೆಗಳ ಚರ್ಚಿಸುವ ಮೂಲಕ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.