ಚನ್ನರಾಯಪಟ್ಟಣ : ತಾಲೂಕಿನ ರೈತರು ಬೆಳೆದ ಬೆಳೆಗೆ ಬೆಲೆ ಸಿಗದೇ ನಷ್ಟ ಅನುಭವಿಸುವುದನ್ನು ತಪ್ಪಿಸುವ ಉದ್ದೇಶದೊಂದಿಗೆ ಹಾಗೂ ಅವರ ಅನುಕೂಲಕ್ಕಾಗಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಹೈಟೆಕ್ ಮಾದರಿಯ 8800 ಮೆಟ್ರಿಕ್ ಟನ್ ಸಾಮರ್ಥ್ಯದ ಬೃಹತ್ ಶೀತಲೀಕರಣ ಘಟಕವನ್ನು ಆರಂಭಿಸಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಹಯೋಗದಲ್ಲಿ ನಿರ್ಮಿಸಲಾಗಿರುವ ಶ್ರೀ ಲಕ್ಷ್ಮೀರಂಗನಾಥ ಕೋಲ್ಡ್ ಸ್ಟೋರೇಜ್ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಸೂಚನೆಯಂತೆ ಖಾಸಗಿ ಸಹಭಾಗಿತ್ವದಲ್ಲಿ ರೈತರ ಅನುಕೂಲಕ್ಕಾಗಿ ಬೃಹತ್ ಶೈತ್ಯಾಗಾರ ಆರಂಭ ಮಾಡಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಮಾಡಿದಾಗ ಯೋಜನೆ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವೆಂದು ಮನಗಂಡು ಎಪಿಎಂಸಿ ಜಾಗವನ್ನು ಅವರ ಸುಪರ್ದಿಗೆ ಕೊಡಲಾಗಿದ್ದು, 8800 ಮೆಟ್ರಿಕ್ ಟನ್ ಸಂಗ್ರಹ ಸಾಮರ್ಥ್ಯದ ಬೃಹತ್ ಶೈತ್ಯಾಗಾರ ನಿರ್ಮಾಣ ಮಾಡಿದ್ದಾರೆ. 6 ಅಂತಸ್ತಿನ ಗೋದಾಮು ಇದಾಗಿದ್ದು, ಇದೇ ಸಂಸ್ಥೆಯವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಯೂ ಶೈತ್ಯಾಗಾರ ನಿರ್ಮಾಣ ಮಾಡಿದ್ದಾರೆ. ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರೈತರ ಅನುಕೂಲಕ್ಕಾಗಿ ಶೈತ್ಯಾಗಾರ ಆರಂಭಿಸಿರುವುದರಿಂದ ಜಿಲ್ಲೆಯ ರೈತರು ಕೊಬ್ಬರಿ, ತರಕಾರಿ ಹಾಗೂ ಧಾನ್ಯಗಳನ್ನು ಸಂಗ್ರಹಿಸಿಡಬಹುದು. ತಮ್ಮ ಬೆಳೆಗೆ ಹೆಚ್ಚು ಲಾಭ ಬಂದಾಗ ಮಾರಾಟ ಮಾಡಲು ಅನುಕೂಲವಾಗುತ್ತದೆ. ಚನ್ನರಾಯಪಟ್ಟಣ ಮಾತ್ರವಲ್ಲದೆ ಅಕ್ಕಪಕ್ಕದ ತಾಲೂಕಿನ ರೈತರಿಗೂ ನೆರವಾಗಲಿದೆ ಎಂದು ತಿಳಿಸಿದರು.
ಕೊಬ್ಬರಿ, ತರಕಾರಿ, ಹಣ್ಣು ಹಾಗೂ ದ್ವಿದಳ ಧಾನ್ಯ ಶೇಖರಣೆಗೆ ಉಪಯುಕ್ತವಾಗಲಿದೆ. ರೈತರಿಗೆ ಹೊರೆಯಾಗದಂತೆ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ. ಇನ್ನು ಮುಂದೆ ಬೆಲೆ ಏರಿಳಿತದಿಂದ ರೈತ ಕಂಗಾಲಾಗುವ ಅಗತ್ಯ ಇಲ್ಲ. ರೈತ ತಾನು ಬೆಳೆದ ಪದಾರ್ಥಗಳನ್ನು ಹಾಳಾಗದಂತೆ ಸಂಗ್ರಹ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಶೈತ್ಯಾಗಾರ ಮಾಲೀಕ ಹಾಗೂ ಉದ್ಯಮಿ ಕಾಂತರಾಜ್ ಮಾತನಾಡಿ, ಎರಡು ವಿಭಾಗಗಳಲ್ಲಿ ನಿರ್ಮಾಣ ಮಾಡಲಾಗಿರುವ ಶೈತ್ಯಾಗಾರದಲ್ಲಿ ಪ್ರತಿ ವಿಭಾಗದಲ್ಲಿ 6 ಫ್ಲೋರ್ ಇದ್ದು, ರೈತರೊಂದಿಗೆ ವರ್ತಕರು ಇದರ ಲಾಭ ಪಡೆಯಬಹುದು. 50 ಕೆಜಿ ಗಾತ್ರದ ಬೆಳೆಗೆ ಮಾಸಿಕ 25 ರೂ. ಬಾಡಿಗೆ ನಿಗದಿಪಡಿಸಲಾಗಿದೆ. ತಾಲೂಕು ಹಾಗೂ ಜಿಲ್ಲೆಯ ಜನ ಇದರ ಲಾಭ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಟಿಎಪಿಸಿಎಂಎಸ್ ಅಧ್ಯಕ್ಷ ಅನಿಲ್‌ಕುಮಾರ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಹಿರಿಸಾವೆ ರಾಮಣ್ಣ, ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮೆಡಿಕಲ್ ವೆಂಕಟೇಶ್, ಎಪಿಎಂಸಿ ಕಾರ್ಯದರ್ಶಿ ಸೋಮಶೇಖರ್ ಸೇರಿದಂತೆ ಇತರರು ಇದ್ದರು.
ಬೃಹತ್ ಕೋಲ್ಡ್ ಸ್ಟೋರೇಜ್ ಆರಂಭ

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional
devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…
ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿದ್ರೆ ಸಾಕು! Watermelon
Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…
ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol
Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…