More

    ಲಸಿಕೆ ವಿರುದ್ಧ ಕಾಂಗ್ರೆಸ್ ಅಪಪ್ರಚಾರ: ಚನ್ನಪಟ್ಟಣದಲ್ಲಿ ಪ್ರವಾಸೋದ್ಯಮ ಸಚಿವ ಯೋಗೇಶ್ವರ್ ಆರೋಪ

    ಚನ್ನಪಟ್ಟಣ : ಲಸಿಕೆ ಬಗ್ಗೆ ವ್ಯಾಪಕವಾಗಿ ನಡೆದ ಅಪಪ್ರಚಾರವೇ ಸೋಂಕು ಹೆಚ್ಚಳವಾಗಲು ಕಾರಣವಾಯಿತು. ಈ ಪಾಪದ ಮೂಟೆಯನ್ನು ಕಾಂಗ್ರೆಸ್ಸಿಗರೇ ಹೊರಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

    ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ತಾಲೂಕು ಆಡಳಿತ ಆಯೋಜಿಸಿದ್ದ ಕೋವಿಡ್ ಲಸಿಕಾ ಮೇಳದಲ್ಲಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಸೇರಿ ಹಲವು ಕಾಂಗ್ರೆಸ್ ಮುಖಂಡರು ಲಸಿಕೆ ಬಗ್ಗೆ ನೀಡಿದ ಹೇಳಿಕೆಗಳು ಜನರಲ್ಲಿ ಗೊಂದಲ ಮೂಡಿಸಿದವು. ಲಸಿಕೆ ಕುರಿತು ಅಪಪ್ರಚಾರ ನಡೆಸಿದವರೇ ಲಸಿಕೆ ಪಡೆಯುತ್ತಿದ್ದಾರೆ
    ಎಂದು ಕಿಡಿಕಾರಿದರು.
    ಕೋವಿಡ್ ವಿಚಾರದಲ್ಲಿ ಜವಾಬ್ದಾರಿ ಯುತವಾದ ವಿರೋಧ ಪಕ್ಷವಾಗಿ ಕಾಂಗ್ರೆಸ್ ಕೆಲಸ ಮಾಡಿಲ್ಲ. ಲಸಿಕೆ, ಲಾಕ್‌ಡೌನ್ ವಿಚಾರದಲ್ಲೂ ಕೈ ನಾಯಕರು ರಾಜಕೀಯ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವರು ಸರ್ಕಾರದ ತೀರ್ಮಾನಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದರು. ಆದರೆ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಕರೊನಾವನ್ನು ಯಶಸ್ವಿಯಾಗಿ ನಿರ್ವಹಿಸಿದೆ ಎಂದರು.

    ಪ್ರಸುತ್ತ ಜನತೆಗೆ ಲಸಿಕೆಯ ಮಹತ್ವ ಅರ್ಥವಾಗಿದೆ. ಲಸಿಕೆ ಪಡೆಯುಲು ಎಲ್ಲರೂ ಮುಂದಾಗುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರೂ ಸಹ ಜನತೆಗೆ ಲಸಿಕೆ ಕೊಡಿಸಲು ಶ್ರಮಿಸುತ್ತಿದ್ದಾರೆ ಎಂದರು.ತಾಲೂಕು ಅಧ್ಯಕ್ಷ ಕೆ.ಟಿ.ಜಯರಾಮ್, ನಗರ ಅಧ್ಯಕ್ಷ ಆರ್. ಶಿವಕುಮಾರ್ ಸೇರಿ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

    ದೆಹಲಿ ಮಾಹಿತಿ ಗೊತ್ತಿಲ್ಲ : 
    ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ರಾಜಕೀಯ ವಿಚಾರ ಮಾತನಾಡಲ್ಲ. ಅರುಣ್‌ಸಿಂಗ್ ಅವರ ಮುಂದೆ ಚರ್ಚೆ ಮಾಡಿರುವ ವಿಚಾರವನ್ನು ನಾನು ಮಾಧ್ಯಮದ ಮುಂದೆ ಹೇಳಲು ಸಾಧ್ಯವಿಲ್ಲ. ಅವರು ನೀಡಿರುವ ವರದಿಯ ಬಗ್ಗೆಯೂ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ ಯೋಗೇಶ್ವರ್, ಕೆಲವರು ದೆಹಲಿಗೆ ಹೋಗಿರುವ ಮಾಹಿತಿ ನನಗೆ ಗೊತ್ತಿಲ್ಲ. ಪಕ್ಷದ ವಿರುದ್ಧ ಮಾತನಾಡಿರುವ ಮೂವರ ವಿರುದ್ಧ ಶಿಸ್ತುಕ್ರಮ ಜರುಗಿಸುವ ವಿಚಾರವೂ ಗೊತ್ತಿಲ್ಲ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts