ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ಗೇರಿ ಹೊಸ ಇತಿಹಾಸ ರಚಿಸಿದ ಲಕ್ಷ್ಯಸೇನ್

ಪ್ಯಾರಿಸ್: ಮೊದಲ ಗೇಮ್ ಹಿನ್ನಡೆಯಿಂದ ಪುಟಿದೆದ್ದ ಭಾರತದ ಯುವ ಷಟ್ಲರ್ ಲಕ್ಷ್ಯ ಸೇನ್ ಒಲಿಂಪಿಕ್ಸ್ ಬ್ಯಾಡ್ಮಿಂಟನ್‌ನ ಪುರುಷರ ಸಿಂಗಲ್ಸ್‌ನಲ್ಲಿ ಸೆಮಿಫೈನಲ್‌ಗೇರಿ ಹೊಸ ಇತಿಹಾಸ ರಚಿಸಿದ್ದಾರೆ. ಅವರು ಈ ಸಾಧನೆ ಮಾಡಿದ ಮೊದಲ ಭಾರತೀಯ ಪುರುಷ ಷಟ್ಲರ್ ಎನಿಸಿದ್ದಾರೆ. ಇದರೊಂದಿಗೆ ಭಾರತಕ್ಕೆ ಸತತ 4ನೇ ಒಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪದಕ ಜಯಿಸುವ ಆಸೆ ಜೀವಂತವಿರಿಸಿದ್ದಾರೆ.

ಶುಕ್ರವಾರ ನಡೆದ ಕ್ವಾರ್ಟರ್‌ೈನಲ್‌ನಲ್ಲಿ ಶ್ರೇಯಾಂಕ ರಹಿತ ಲಕ್ಷ್ಯ ಸೇನ್ 19-21, 21-15, 21-19 ಮೂರು ಗೇಮ್‌ಗಳ ಕಠಿಣ ಹೋರಾಟದಲ್ಲಿ 12ನೇ ಶ್ರೇಯಾಂಕಿತ ಚೀನಾ ತೈಪೆಯ ಚೌ ಟಿನ್ ಚೆನ್ ಎದುರು ಹೋರಾಟಯುತ ಗೆಲುವು ಒಲಿಸಿಕೊಂಡರು. ಮೊದಲ ಗೇಮ್‌ನ ನಿಕಟ ಪೈಪೋಟಿ ನಡುವೆ ಹಿನ್ನಡೆ ಅನುಭವಿಸಿದ ಬಳಿಕ 2ನೇ ಗೇಮ್‌ನಲ್ಲಿ ಆಕ್ರಮಣಕಾರಿ ಆಟವಾಡಿದ 22 ವರ್ಷದ ಲಕ್ಷ್ಯ ಸೇನ್ ಸಮಬಲ ಸಾಧಿಸಿ ಪಂದ್ಯವನ್ನು ನಿರ್ಣಾಯಕ ಮೂರನೇ ಗೇಮ್‌ಗೆ ವಿಸ್ತರಿಸಿದರು. ನಂತರ ಆರಂಭಿಕ ಮುನ್ನಡೆ ಕಾಯ್ದುಕೊಂಡ ಲಕ್ಷ್ಯ ಸೇನ್ ಗೆಲುವು ಒಲಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಚೌ ಟಿನ್ ಚೆನ್ ಎದುರಿನ ದಾಖಲೆಯ 2-3 ಅಂತರ ತಗ್ಗಿಸಿದರು. ಉತ್ತರಾಖಂಡ ಮೂಲದ ಲಕ್ಷ್ಯ ಸೇನ್ ಬೆಂಗಳೂರಿನಲ್ಲೇ ತರಬೇತಿ ಪಡೆಯುತ್ತಿದ್ದಾರೆ.

Share This Article

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…

ನಿಮ್ಮ ಅಂಗೈನಲ್ಲಿ ಮೀನಿನ ಚಿಹ್ನೆ ಇದ್ರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಸಂಗತಿ…

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…

30 ದಿನಗಳಲ್ಲೇ ಸ್ಲಿಮ್ ಆ್ಯಂಡ್​ ಫಿಟ್​ ಆಗಬೇಕಾ? ಪ್ರತಿದಿನ ಇಡ್ಲಿ ತಿನ್ನಿ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…