More

    ಕಳೆದ ವರ್ಷ 247 ಅಪ್ರಾಪ್ತೆಯರು ಗರ್ಭಧಾರಣೆ

    ಶಿವಮೊಗ್ಗ: ಕಳೆದೊಂದು ವರ್ಷದಲ್ಲಿ ಜಿಲ್ಲೆಯಲ್ಲಿ 102 ಬಾಲ್ಯ ವಿವಾಹಗಳು, 156 ಪೋಕ್ಸೊ ಹಾಗೂ 247 ಅಪ್ರಾಪ್ತೆಯರು ಗರ್ಭ ಧರಿಸಿರುವ ಸಂಬಂಧ ಪ್ರಕರಣ ದಾಖಲಾಗಿದ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಅಪರ್ಣಾ ಎಂ.ಕೊಳ್ಳ ಆತಂಕ ವ್ಯಕ್ತಪಡಿಸಿದರು.

    ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೋಮವಾರ ಜಿಲ್ಲೆ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಿದ್ದ ಮಕ್ಕಳ ಹಕ್ಕುಗಳು-ಕಾಯ್ದೆಗಳ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
    ಮಕ್ಕಳ ಹಕ್ಕುಗಳನ್ನು ರಕ್ಷಿಸುವಲ್ಲಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು. ನಿರ್ಲಕ್ಷೃ ತೋರುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು. ಮುನ್ನೆಚ್ಚರಿಕೆ ನಡುವೆಯೂ ದಿನದಿಂದ ದಿನಕ್ಕೆ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿ ಎಂದರು.
    ಬಾಲ್ಯ ವಿವಾಹ ನಿಷೇಧ ಕಾಯ್ದೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ, ಆರ್‌ಟಿಇ ಸೇರಿದಂತೆ ಹಲವಾರು ಕಾಯ್ದೆ, ಕಾನೂನುಗಳಿದ್ದರೂ ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುತ್ತಿದೆ. ಕಾಯ್ದೆ ಕಾನೂನು ಸಮರ್ಪಕವಾಗಿ ಅನುಷ್ಠಾನವಾಗುತ್ತಿಲ್ಲವೆ? ಅಥವಾ ಪಾಲನೆಯಾಗುತ್ತಿಲ್ಲವೆ? ಎಂಬ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಹೇಳಿದರು.
    ಕೆಲವು ಜಿಲ್ಲೆಗಳಲ್ಲಿ ಮಕ್ಕಳ ಜೀವ ಮತ್ತು ಅವರ ಹಕ್ಕುಗಳಿಗೆ ಸಂಬಂಧಿಸಿದ ಪ್ರಕರಣಗಳು ಘಟಿಸಿದ್ದು, ನೇರವಾಗಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದ್ದರಿಂದ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.
    ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಿ.ಎಂ.ರೇಖಾ, ಎಸ್‌ಎಂಎಸ್‌ಎಸ್ ನಿರ್ದೇಶಕ ಫಾದರ್ ಕ್ಲಿಫರ್ಡ್ ರೋಶನ್ ಪಿಂಟೊ, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ಮಕ್ಕಳ ಹಿರಿಯ ವಿಶೇಷ ಪೊಲೀಸ್ ಅಧಿಕಾರಿ ಬಾಬು ಅಂಜನಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts