24.9 C
Bangalore
Wednesday, December 11, 2019

VIDEO| ಹಿರಿಯ ಗಾಯಕಿ ಲತಾ ಮಂಗೇಶ್ಕರ್​ ಆರೋಗ್ಯದ ವದಂತಿಗಳಿಗೆ ಕಿವಿಗೊಡಬೇಡಿ: ಗಾಯಕ ಎಸ್​ಪಿಬಿಯಿಂದ ಮನವಿ

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಅವರ ನಿಧನದ ಬಗ್ಗೆ ಕೆಲ ಕಿಡಿಗೇಡಿಗಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಇದರಿಂದ ಬೇಸರಗೊಂಡಿರುವ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಫೇಸ್​ಬುಕ್ ಮೂಲಕ​ ಈ ರೀತಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಲತಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿರುವ ವದಂತಿಗಳು ಖಂಡಿತ ತಪ್ಪು. ಏನಾಗಿದೆ ಎಂಬ ಮಾಹಿತಿಯ ಅರಿವಿಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪೋಸ್ಟ್​ಗಳನ್ನು ಮಾಡುತ್ತಿರುವುದು ಸರಿಯಲ್ಲ. ನಾನು ವೈಯಕ್ತಿಕವಾಗಿ ವಿಚಾರಿಸಿದ್ದೇನೆ. ಲತಾ ಅವರು ನಿನ್ನೆಗಿಂತ ಇಂದು ಸಾಕಷ್ಟು ಚೇತರಿಸಿಕೊಂಡಿದ್ದಾರೆ. ವಿಶ್ವದಾದ್ಯಂತ ಕೋಟ್ಯಂತರ ಜನರು ಅವರ ಚೇತರಿಕೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ಇನ್ನಷ್ಟು ಕಾಲ ಜೀವಿಸುತ್ತಾರೆ. ಇದ್ಯಾವುದರ ಅರಿವೇ ಇಲ್ಲದೆ. ಸಮಾಜದ ದಾರಿ ತಪ್ಪಿಸಲು ಕೆಲವರು ಕೆಟ್ಟದಾಗಿ ಪೋಸ್ಟ್​ ಮಾಡುವುದನ್ನು ನೀವು ಶೇರ್​ ಮಾಡಬೇಡಿ. ಬದಲಾಗಿ ಎಲ್ಲರೂ ಲತಾ ಮಂಗೇಶ್ಕರ್​ ಅವರಿಗಾಗಿ ಪ್ರಾರ್ಥಿಸೋಣ ಎಂದು ವಿಡಿಯೋ ಮಾಡಿ ಫೇಸ್​ಬುಕ್​ನಲ್ಲಿ ಶೇರ್​ ಮಾಡಿ ಮನವಿ ಮಾಡಿಕೊಂಡಿದ್ದಾರೆ.

ಗುರುವಾರ ರಾತ್ರಿಯಿಂದಲೂ ಲತಾ ಅವರು ನಿಧನರಾಗಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಇದರಿಂದ ಎಚ್ಚೆತ್ತ ಕುಟುಂಬ ಗುರುವಾರ ರಾತ್ರಿಯೇ ಲತಾ ಅವರ ಟ್ವಿಟರ್ ಖಾತೆಯ​ ಮೂಲಕವೇ “ಲತಾ ದೀದಿಯ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ನಿಮ್ಮ ಕಾಳಜಿ ಮತ್ತು ಪಾರ್ಥನೆಗೆ ಧನ್ಯವಾದಗಳನ್ನು ತಿಳಿಸುತ್ತೇವೆ” ಎಂದು ಸಂದೇಶ ರವಾನಿಸುವ ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು. ಇದೀಗ ಎಸ್​ಪಿಬಿ ಕೂಡ ವದಂತಿಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ.

ಕಳೆದ 6 ದಿನಗಳಿಂದ ಆಸ್ಪತ್ರೆಯಲ್ಲಿರುವ ಲತಾ ಮಂಗೇಶ್ಕರ್​ ಅವರು ಇನ್ನು ಐಸಿಯುನಲ್ಲೇ ಇದ್ದಾರೆ ಎನ್ನಲಾಗಿದೆ. ಶ್ವಾಸಕೋಶ ತೊಂದರೆಯಿಂದ ಬಳಲುತ್ತಿರುವ ಅವರು ನ್ಯುಮೋನಿಯಾಗೂ ತುತ್ತಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈವರೆಗೂ ಅವರ ಆರೋಗ್ಯದ ಬಗ್ಗೆ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಇದರ ನಡುವೆ ಅನೇಕ ಬಾಲಿವುಡ್​ ನಟ-ನಟಿಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿಕೊಂಡು ಹೋಗುತ್ತಿದ್ದಾರೆ. (ಏಜೆನ್ಸೀಸ್​)

S. P. Balasubrahmanyam ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಶುಕ್ರವಾರ, ನವೆಂಬರ್ 15, 2019

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...