More

    ಲಿಂ. ಶಾಂತವೀರ ಪಟ್ಟಾಧ್ಯಕ್ಷರ ಪುಣ್ಯಸ್ಮರಣೋತ್ಸವ ಇಂದಿನಿಂದ

    ಹಾವೇರಿ: ಸ್ಥಳೀಯ ಸಿಂದಗಿಮಠದಲ್ಲಿ ಲಿಂ. ಶಾಂತವೀರ ಪಟ್ಟಾಧ್ಯಕ್ಷರ 40ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಫೆ. 18ರಿಂದ 23ರವರೆಗೆ ವಿವಿಧ ಧಾರ್ವಿುಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

    18ರಂದು ಸಂಜೆ 7.30ರ ಧಾರ್ವಿುಕ ಕಾರ್ಯಕ್ರಮದಲ್ಲಿ ಹರ್ಲಾಪುರ ಕೊಟ್ಟೂರೇಶ್ವರಮಠದ ಅಭಿನವ ಕೊಟ್ಟೂರೇಶ್ವರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಬಸವರಾಜ ಘಿವಾರಿ ಸಂಗೀತ ನೀಡುವರು.

    19ರಂದು ಸಂಜೆ 7.30ರ ಕಾರ್ಯಕ್ರಮದಲ್ಲಿ ಬೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಸರಿಗಮಪ ರಿಯಾಲಿಟಿ ಶೋ ಖ್ಯಾತಿಯ ಜ್ಞಾನೇಶ್ವರ ಅವರಿಂದ ವಿಶೇಷ ಸಂಗೀತ ಕಾರ್ಯಕ್ರಮ ಜರುಗಲಿದೆ.

    20ರಂದು ಸಂಜೆ 7.30ಕ್ಕೆ ಜರುಗುವ ಕಾರ್ಯಕ್ರಮದಲ್ಲಿ ತೊಗರ್ಸಿ ಮಳೇಹಿರೇಮಠದ ಮಹಾಂತದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಹಾಸ್ಯ ಕಲಾವಿದರಾದ ಮಹದೇವ ಸತ್ತಿಗೇರಿ ಹಾಗೂ ಮಹಾಂತೇಶ ಕುನ್ನಾಳ ಅವರು ನಗೆಹಬ್ಬ ಕಾರ್ಯಕ್ರಮ ನಡೆಸಿಕೊಡುವರು.

    21ರಂದು ಮಹಾಶಿವರಾತ್ರಿ ಅಂಗವಾಗಿ ರಾತ್ರಿ 8.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಹೊತನಹಳ್ಳಿ ಸಿಂದಗಿಮಠದ ಶಂಭುಲಿಂಗ ಪಟ್ಟಾಧ್ಯಕ್ಷರು ಅಧ್ಯಕ್ಷತೆ ವಹಿಸುವರು. ಕಲಘಟಗಿಯ ಮಲ್ಲಯ್ಯಸ್ವಾಮಿ ತೋಟಗಂಟಿ ಹಾಗೂ ಸಂಗಡಿಗರಿಂದ ಜಾನಪದ ಕಾರ್ಯಕ್ರಮ ಜರುಗುವುದು.

    22ರಂದು ಬೆಳಗ್ಗೆ 10 ಗಂಟೆಗೆ ಸಿಂದಗಿ ಶಾಂತವೀರೇಶ್ವರ ಆಯುರ್ವೆದ ವೈದ್ಯಕೀಯ ಮಹಾವಿದ್ಯಾಲಯದಿಂದ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸಂಜೆ 7.30ಕ್ಕೆ ಪ್ರವಚನ ಮಂಗಲ ಕಾರ್ಯಕ್ರಮ ನಡೆಯಲಿದ್ದು, ಯಡೆಯೂರು ತೋಂಟದಾರ್ಯಮಠದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಂತರ ಶಿರಗುಪ್ಪದ ಸ್ವಾಮಿ ವಿವೇಕಾನಂದ ಯೋಗ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಂದ ಮಲ್ಲಕಂಬ ಹಾಗೂ ಹಗ್ಗದ ಮೇಲೆ ಯೋಗ ಪ್ರದರ್ಶನಗೊಳ್ಳಲಿದೆ.

    ಫೆ. 23ರಂದು ಬೆಳಗ್ಗೆ ಲಿಂ. ಸಿಂದಗಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ ಹಾಗೂ ಮಧ್ಯಾಹ್ನ ಮಹಾದಾಸೋಹ ನಡೆಯಲಿದೆ. ಸಂಜೆ 7.30ಕ್ಕೆ ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಗದುಗಿನ ಡಾ. ತೋಂಟದಾರ್ಯ ಜಗದ್ಗುರುಗಳು ವಹಿಸಲಿದ್ದು, ಮಾಜಿ ಸಚಿವ ರುದ್ರಪ್ಪ ಲಮಾಣಿ ಅವರು ಶ್ರೀ ಸಿದ್ಧಲಿಂಗ ಸಿರಿ ಭಕ್ತರ ವಸತಿ ನಿಲಯ ಉದ್ಘಾಟಿಸುವರು. ನಿವೃತ್ತ ಪ್ರಾಚಾರ್ಯ ಡಾ. ಎಸ್. ಶಿವಾನಂದ ಉಪನ್ಯಾಸ ನೀಡುವರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts