ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ, ದತ್ತಿನಿಧಿ ವಿತರಣೆ

jayanth
ಪಡುಬಿದ್ರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ, ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಲಾಯಿತು
Published on

ಪಡುಬಿದ್ರಿ: ನಿರ್ಭೀತ ವರದಿ ಮಾಡುವ ಎದೆಗಾರಿಕೆ ಹಾಗೂ ನ್ಯಾಯ ನಿಷ್ಠುರವಾಗಿ ಸಮಾಜಮುಖಿ ಚಿಂತನೆಗಳನ್ನು ಮಂಡಿಸುವ ಗುಣ ಪತ್ರಕರ್ತರು ಹೊಂದಿರಬೇಕು ಎಂದು ತುಳು ಜಾನಪದ ಸಂಶೋಧಕ ಡಾ.ವೈ.ಎನ್.ಶೆಟ್ಟಿ ಹೇಳಿದರು.

ಪಡುಬಿದ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ದಿ.ಜಯಂತ್ ಪಡುಬಿದ್ರಿ ಸಂಸ್ಮರಣೆ- ದತ್ತಿನಿಧಿ ವಿತರಣಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ದತ್ತಿನಿಧಿ ವಿತರಿಸಿ ಮಾತನಾಡಿದರು.

ಪತ್ರಕರ್ತ ರಾಮಚಂದ್ರ ಆಚಾರ್ಯ, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಅಜಯ್ ಕುಮಾರ್ ಎಸ್, ಮುಖ್ಯ ಶಿಕ್ಷಕಿ ಗೀತಾ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಯದರ್ಶಿ ಸಂತೋಷ್ ಕಾಪು, ಕೋಶಾಧಿಕಾರಿ ಹೇಮನಾಥ್ ಪಡುಬಿದ್ರಿ ಉಪಸ್ಥಿತರಿದ್ದರು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಹರೀಶ್ ಹೆಜಮಾಡಿ ಸ್ವಾಗತಿಸಿದರು. ಪತ್ರಕರ್ತ ಪುಂಡಲೀಕ ಮರಾಠೆ ಕಾರ್ಯಕ್ರಮ ನಿರೂಪಿಸಿದರು. ಪೂರ್ವ ಅಧ್ಯಕ್ಷ ರಾಕೇಶ್ ಕುಂಜೂರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net