More

    ದಿವಂಗತ ಸುರೇಶ್ ಅಂಗಡಿ ಸಮಾಧಿ, ರುದ್ರಭೂಮಿಗೆ ತಡೆಗೋಡೆ ನಿರ್ಮಾಣಕ್ಕೆ ಸಿಎಂಗೆ ಮನವಿ

    ಬೆಂಗಳೂರು: ನವದೆಹಲಿಯಲ್ಲಿ ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಅಂತ್ಯಕ್ರಿಯೆ ನಡೆಸಿದ ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ನಿರ್ಮಿಸಬೇಕು ಎಂದು ಸುರೇಶ್ ಅಂಗಡಿ ಅವರ ಅಳಿಯಂದಿರಾದ ಸಂಕಲ್ಪ ಶೆಟ್ಟರ್, ಡಾ.ರಾಹುಲ್ ಪಾಟೀಲ್ ಬುಧವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

    ಕೊರೋನಾ ಸೋಂಕಿಗೆ ಒಳಗಾಗಿ ದೆಹಲಿಯ ಏಮ್ಸ್ ನಲ್ಲಿ ನಿಧನರಾಗಿದ್ದ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ದೆಹಲಿಯ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ನಡೆಸಲಾಗಿತ್ತು. ಅಲ್ಲಿ ದಿವಂಗತರ ಘನತೆಗೆ ತಕ್ಕುದಾದ ಸಮಾಧಿ ನಿರ್ಮಿಸುವ ಮೂಲಕ ಗೌರವ ಸಲ್ಲಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ದ್ವಾರಕದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ಹಾಗೂ ಸಮಾಧಿಯನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿಯವರನ್ನು ಕೋರಿದರು.

    ಇದನ್ನೂ ಓದಿ: ಅಶೋಕ ಗಸ್ತಿ ಪತ್ನಿಗೆ ರಾಜ್ಯಸಭಾ ಸದಸ್ಯ ಸ್ಥಾನ ನೀಡಿ

    ಕಳೆದ ಬುಧವಾರ ಸುರೇಶ್ ಅಂಗಡಿ ಅವರು ಕೊರೋನಾದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಕೋವಿಡ್-19 ಶಿಷ್ಟಾಚಾರದ ಪ್ರಕಾರವೇ ಅಂತ್ಯಸಂಸ್ಕಾರ ಮಾಡಲಾಗಿತ್ತು. ಕುಟುಂಬ ವರ್ಗದವರು ಪಿಪಿಇ ಕಿಟ್ ಹಾಕಿಕೊಂಡೆ ಪೂಜಾ ವಿಧಾನಗಳನ್ನು ಪೂರೈಸಿದ್ದರು. ರುದ್ರಭೂಮಿಗೆ ಕೆಲವೇ ಕೆಲವು ಜನರಿಗೆ ಪ್ರವೇಶಾವಕಾಶ ನೀಡಲಾಗಿತ್ತು.

    ಸೈಲೆಂಟಾಗಿ 20 ಲಕ್ಷ ರೂಪಾಯಿ ಎತ್ಕೊಂಡು ಹೋದ 11ರ ಬಾಲಕ !: ಪಿಎನ್​ಬಿ ಅಧಿಕಾರಿಗಳು ಎಚ್ಚೆತ್ತಾಗ ತಡ ಆಗಿತ್ತು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts