More

    ಲಾಠಿ ಬೀಸಿದ ಪೇದೆ ವಜಾಗೊಳಿಸಿ- ಬಿ.ಎ.ಕುಂಬಾರ

    ಚಿಕ್ಕೋಡಿ: ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಬಸವರಾಜ ಡೊಳ್ಳಿನ ಮೇಲೆ ಪೋಲಿಸ್ ಪೇದೆ ಹಲ್ಲೆ ಮಾಡಿದ್ದು ಖಂಡನೀಯವಾಗಿದೆ. ಪೇದೆಯನ್ನು ತಕ್ಷಣ ವಜಾಗೊಳಿಸಬೇಕು. ಇಲ್ಲದಿದ್ದಲ್ಲಿ ಏಪ್ರಿಲ್ 1ರಿಂದ ತುರ್ತು ಸೇವೆ ನಿಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಸಹಾಯಕರ ಹಾಗೂ ಮೇಲ್ವಿಚಾರಕರ ಸಂಘದ ಅಧ್ಯಕ್ಷ ಬಿ.ಎ.ಕುಂಬಾರ ಹೇಳಿದ್ದಾರೆ.

    ಪಟ್ಟಣದ ಸರ್ಕಾರಿ ನೌಕರರ ಸಭಾಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರೊನಾ ನಿಯಂತ್ರಣ ತುರ್ತು ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಜಿಲ್ಲಾ ಆರೋಗ್ಯ ಇಲಾಖೆ ಮೇಲ್ವಿಚಾರಕ ಬಸವರಾಜ ಅವರು ಕರೊನಾ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಯೊಂದಿಗೆ ಕಚೇರಿಗೆ ಹೋಗುತ್ತಿದ್ದರು. ಗಾಂಧಿನಗರದ ರಾಷ್ಟ್ರೀಯ ಹೆದ್ದಾರಿ ಬಳಿ ಪೊಲೀಸರು ತಡೆದಾಗ ಗುರುತಿನ ಚೀಟಿ ತೋರಿಸಿದರೂ ಲಾಠಿ ಬೀಸಿದ್ದಾರೆ.

    ಇದರಿಂದ ತೀವ್ರವಾಗಿ ಗಾಯಗೊಂಡ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಹಲ್ಲೆಯಿಂದ ಬಸವರಾಜ ಅವರ ಕೈ ಮೂಳೆ ಮುರಿದಿದೆ. ಅತ್ಯಂತ ಅಮಾನುಷವಾಗಿ ವರ್ತಿಸಿರುವ ಪೊಲೀಸ್ ಪೇದೆಯನ್ನು ಮಾ. 31ರೊಳಗೆ ವಜಾ ಮಾಡಬೇಕು. ಇಲ್ಲವಾದಲ್ಲಿ ಏ.1ರಿಂದ ಆರೋಗ್ಯ ಸಹಾಯಕರು ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಎಚ್ಚರಿಸಿದರು.

    ಆರೊಗ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್, ಕೈತೊಳೆಯಲು ಸ್ಯಾನಿಟೈಜರ್ ಇಲ್ಲ. ಸೌಲಭ್ಯಗಳ ಕೊರತೆ ಮಧ್ಯೆಯೂ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದು, ಅವರಿಗೂ ಕುಟುಂಬ ಇದೆ ಎನ್ನುವುದನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಮನವಿ ಮಾಡಿದರು.

    ಬೆಳಗಾವಿ ನಗರ ಪೊಲೀಸ್ ಆಯಕ್ತ ಬಿ.ಎಸ್. ಲೋಕೇಶಕುಮಾರ ಜಿಲ್ಲಾ ಆರೋಗ್ಯ ಮೇಲ್ವಿಚಾರಕ ಬಸವರಾಜ ಡೊಳ್ಳಿನ ಅವರ ಮೇಲೆ ಪೊಲೀಸ್ ಪೇದೆ ಉದ್ದೇಶಪೂರ್ವಕವಾಗಿ ಲಾಠಿ ಬೀಸಿಲ್ಲ ಎಂದು ಹೇಳಿಕೆ ನೀಡಿರುವುದನ್ನು ಆರೋಗ್ಯ ಇಲಾಖೆ ತೀವ್ರವಾಗಿ ಖಂಡಿಸುತ್ತದೆ.
    | ಬಿ.ಎ. ಕುಂಬಾರ ಅಧ್ಯಕ್ಷರು. ಆರೋಗ್ಯ ಇಲಾಖೆಯ ಸಹಾಯಕರು ಹಾಗೂ ಮೇಲ್ವಿಚಾರಕರ ರಾಜ್ಯ ಸಂಘಟನೆ ಬೆಂಗಳೂರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts