ಮತ ಚಲಾಯಿಸಲು ಬಂದ ಮಹಿಳೆಗೆ ಲಾಠಿ ಏಟು; ಪೊಲೀಸರಿಗೆ ಗ್ರಾಮಸ್ಥರಿಂದ ತರಾಟೆ

Police
Published on

ಗದಗ: ಮತದಾನಕ್ಕೆ ಬಂದ ಮಹಿಳೆಗೆ ಲಾಠಿಯಿಂದ ಹೊಡೆದಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಶೀರನಹಳ್ಳಿ ಮತಗಟ್ಟೆ ಸಂಖ್ಯೆ 216ರಲ್ಲಿ ನಡೆದಿದೆ. ಘಟನೆಯಿಂದ ಮತದಾನ ಸ್ಥಗಿತ ಮಾಡಿದ ಗ್ರಾಮಸ್ಥರು ಚುನಾವಣಾ ಅಧಿಕಾರಿಗಳ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

ಹುಲಗೇಮ್ಮ ಎಂಬ ಮಹಿಳೆಯ ಕೈಗೆ ಲಾಠಿಯಿಂದ ಹೊಡೆದಿರುವ ಆರೋಪ, ಸಿಪಿಐ ಸದಲಗಿ ಹಾಗೂ ಗ್ರಾಮಸ್ಥರು ನಡುವೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ. ಘಟನೆ ನಡೆಯುತ್ತಿದ್ದಂತೆ ಲಾಠಿಯಿಂದ ಹೊಡೆದಿರುವ ಸಿಬ್ಬಂದಿ ಮೇಲೆ ಕ್ರಮ ಜರುಗಿಸುವಂತೆ ಜನರು ಒತ್ತಾಯಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳನ್ನು ಏಕವಚನದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.

ಕ್ರಮ ಜುರುಗಿಸುವುದಾಗಿ ಭರವಸೆ

ಘಟನೆ ತಿಳಿದು ತಹಶೀಲ್ದಾರ್ ಶ್ರುತಿ ಮಳ್ಳಪ್ಪಗೌಡ ಕೂಡಲೇ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ, ಮಾಹಿತಿ ಪಡೆದುಕೊಂಡಿದ್ದಾರೆ. ಮತಗಟ್ಟೆಯಲ್ಲಿ ಹೆಚ್ವಿನ ಸಂಖ್ಯೆಯಲ್ಲಿ ಜನರು ಮತದಾನಕ್ಕೆ ಬಂದಾಗ ಘಟನೆ ನಡೆದಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ತಹಶೀಲ್ದಾರ್ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net