ಬಾಗಲಕೋಟೆ : ವೀರಶೈವ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿ ಹೋರಾಟ ತೀವ್ರತೆ ಪಡೆದುಕೊಂಡಿದ್ದು, ಹೋರಾಟಗಾರರ ಮೇಲಿನ ಲಾಠಿಚಾರ್ಜ್‌ನ್ನು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಭಗವತ್ಪಾದರು ಖಂಡಿಸಿದ್ದಾರೆ.
ಪಂಚಮಸಾಲಿ ಸಮಾಜ ಉತ್ತರ ಕರ್ನಾಟಕದಲ್ಲಿ ಹೆಚ್ಚಾಗಿರುವುದರಿಂದ ಸಹಜವಾಗಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸರ್ಕಾರದ ಗಮನ ಸೆಳೆಯುವುದಕ್ಕಾಗಿ ಪ್ರತಿಭಟನೆಗೆ ಮುಂದಾಗಿದೆ. ಆದರೆ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕಾದ ಸರ್ಕಾರ ಹೋರಾಟಗಾರರನ್ನೇ ಗುರಿಯಾಗಿಸಿಕೊಂಡು ಲಾಠಿಚಾರ್ಜ್ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ನಡೆಯಬಾರದು. ಶಾಂತಿಯುತ ಹೋರಾಟಗಾರರ ಮೇಲೆ ಕಾನೂನಿನ ಅಸ್ತ್ರ ಪ್ರಯೋಗಿಸುವುದು ಪರೋಕ್ಷವಾಗಿ ಅಮಾಯಕರನ್ನು ಬೆದರಿಸುವ ತಂತ್ರವಾಗಿದೆ ಎಂದು ಜಗದ್ಗುರುಗಳು ಅಭಿಪ್ರಾಯಿಸಿದ್ದಾರೆ.
ಈಗಾಗಲೇ ಸಮಸ್ತ ವೀರಶೈವ ಲಿಂಗಾಯತ ಸಮಾಜಕ್ಕೆ ಕೇಂದ್ರ ಓಬಿಸಿಯ ಬೇಡಿಕೆ ಒಂದು ಕಡೆ ಇದೆ. ಪಂಚಮಸಾಲಿ ಪ್ರತ್ಯೇಕ ಹೋರಾಟ ಮತ್ತೊಂದು ಕಡೆ ದೀರ್ಘಕಾಲದಿಂದ ಇದೆ. ಸರ್ಕಾರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಶ್ರೀಶೈಲ ಜಗದ್ಗುರುಗಳು ಒತ್ತಾಯಿಸಿದ್ದಾರೆ.
ಇ-ಖಾತಾ ಗೊಂದಲ ನಿವಾರಣೆಗೆ ಕ್ರೆಡಾಯ್ ಒತ್ತಾಯ; ಕಾವೇರಿ 2.o ತಂತ್ರಾಂಶ ಸರಿಪಡಿಸಲು ಮನವಿ