More

    ಕರ್ನಾಟಕ ದರ್ಶನ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ

    ಕುಶಾಲನಗರ: ಪ್ರವಾಸೋದ್ಯಮ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳ 8ನೇ ತರಗತಿ ಮಕ್ಕಳಿಗೆ ಆಯೋಜಿಸಿರುವ 4 ದಿನಗಳ ಕರ್ನಾಟಕ ದರ್ಶನ ಶೈಕ್ಷಣಿಕ ಉಚಿತ ಪ್ರವಾಸಕ್ಕೆ ಭಾನುವಾರ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಚಾಲನೆ ನೀಡಲಾಯಿತು.

    ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕೆ.ಆರ್.ರತ್ನಕುಮಾರ್, ಮಕ್ಕಳಿಗೆ ಸರ್ಕಾರದಿಂದ ಐತಿಹಾಸಿಕ ಹಾಗೂ ಪ್ರೇಕ್ಷಣೀಯ ಸ್ಥಳಗಳ ವೀಕ್ಷಣೆಗೆಂದು ಉಚಿತ ಪ್ರವಾಸ ಹಮ್ಮಿಕೊಂಡಿದ್ದು, ಇದರಿಂದ ಮಕ್ಕಳು ಹೆಚ್ಚಿನ ಜ್ಞಾನ ಮತ್ತು ಅನುಭವ ಪಡೆಯಲು ಸಾಧ್ಯ ಎಂದು ಹೇಳಿದರು.

    ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಇಂತಹ ಪ್ರವಾಸ ಮಕ್ಕಳ ಶೈಕ್ಷಣಿಕ ಜೀವನ ರೂಪಿಸಲಿದೆ ಎಂದರು.

    ತಾಲೂಕು ನೋಡಲ್ ಅಧಿಕಾರಿ ಕೆ.ಬಿ.ರಾಧಾಕೃಷ್ಣ ಮಾತನಾಡಿ, ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನಿಂದ 200 ವಿದ್ಯಾರ್ಥಿಗಳು ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ, ಬೇಲೂರು, ಹಳೇಬೀಡು, ಚಿತ್ರದುರ್ಗ, ಹಂಪಿ ಮತ್ತಿತರ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಪ್ರವಾಸ ಸಂದರ್ಭ ಮಕ್ಕಳಿಗೆ ಪ್ರವಾಸೋದ್ಯಮ ಇಲಾಖೆ ಊಟೋಪಚಾರ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಿದೆ ಎಂದರು.

    ಪ್ರವಾಸೋದ್ಯಮ ಇಲಾಖೆ ಸಮನ್ವಯಾಧಿಕಾರಿ ರುಕ್ಮಾಂಗದ ವಿದ್ಯಾರ್ಥಿಗಳಿಗೆ ಟಿ ಶರ್ಟ್, ಕಿಟ್ ಬ್ಯಾಗ್, ನೋಟ್‌ಬುಕ್ ಹಾಗೂ ಪ್ರವಾಸಿ ಕೈಪಿಡಿಯನ್ನು ವಿತರಿಸಲಾಯಿತು. ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎ.ಲಕ್ಷ್ಮಣ್, ಮಾರ್ಗದರ್ಶಿ ಶಿಕ್ಷಕರಾದ ಎಂ.ಎಲ್.ಸುಕುಮಾರಿ, ಕೆ.ಎಲ್.ಉದಯ್ ಕುಮಾರ್, ಆರ್.ಚೇತನ್, ಗೋಪಾಲಕೃಷ್ಣ, ವಸಂತ್, ತಮ್ಮಯ್ಯ, ಎಚ್.ಎಂ.ಪ್ರಕಾಶ್, ವಿವಿಧ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts