20.4 C
Bengaluru
Sunday, January 19, 2020

ಲೈವ್ ಧಾರವಾಡ ಪೇಡಾ ಮಳಿಗೆ ಪ್ರಾರಂಭ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಬೆಂಗಳೂರು: ಸಿಹಿತಿನಿಸುಗಳ ತಯಾರಿಕೆ ಮತ್ತು ಮಾರಾಟಕ್ಕೆ ಪ್ರಸಿದ್ಧವಾಗಿರುವ ಬಿಗ್ ಮಿಶ್ರಾ ಪೇಡಾ ಪ್ರೖೆ. ಲಿ. ಗಾಂಧಿನಗರದ ಗುಬ್ಬಿ ವೀರಣ್ಣ ನಾಟಕ ರಂಗಮಂದಿರದ ಮುಂಭಾಗದಲ್ಲಿ ಶನಿವಾರ ನೂತನ ‘ಲೈವ್ ಧಾರವಾಡ ಪೇಡಾ’ ಮಳಿಗೆ ತೆರೆದಿದೆ.

ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಗಣೇಶ್ ಮಿಶ್ರಾ ಮಾತನಾಡಿ, ದೇಶದಲ್ಲೇ ಮೊದಲ ಬಾರಿಗೆ ಲೈವ್ ಮಳಿಗೆಯನ್ನು ಪ್ರಾರಂಭಿಸಿರುವುದು ಸಂತಸ ತಂದಿದೆ. ಸ್ಥಳದಲ್ಲೇ ಪೇಡಾ ತಯಾರಿಸಿ ಗ್ರಾಹಕರಿಗೆ ವಿತರಿಸಲಾಗುವುದು. ಹೊಸ ಮಳಿಗೆಯಲ್ಲಿ ಪೇಡಾ, ಕುಂದಾ, ಕರದಂಟು, ಮೈಸೂರು ಪಾಕ್, ಲಾಲ್ ಪೇಡಾ, ಜಿಲೇಬಿ, ರಸಗುಲ್ಲಾ, ಜಾಮೂನ್, ಪಾಪಡಿ ಚಟ್ನಿ ಸೇರಿ 15 ತಿನಿಸುಗಳು ಒದಗಿಸಲಾಗುತ್ತದೆ ಎಂದರು.

ಕೆಜಿಗೆ 560 ರೂ: ಒಂದು ಕೆಜಿಗೆ ಪೇಡಾಗೆ 560 ರೂ. ದರ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ 141 ಮಳಿಗೆಗಳಿವೆ. ಪ್ರತಿದಿನ 1.5 ಲಕ್ಷ ಪೇಡಾ ಮಾರಾಟವಾಗುತ್ತಿದ್ದು, ನಿತ್ಯ 35 ಲಕ್ಷ ರೂ. ವಹಿವಾಟು ನಡೆಯುತ್ತಿದೆ. ವರ್ಷಕ್ಕೆ 110 ಕೋಟಿ ರೂ. ವಹಿವಾಟು ನಡೆಸುವ ಗುರಿ ಇದೆ ಎಂದು ಸಂಜಯ್ ಹೇಳಿದರು.

1933ರಲ್ಲಿ ಧಾರವಾಡದಲ್ಲಿ ಆರಂಭ: ಧಾರವಾಡದ ಜ್ಞಾನನಗರದಲ್ಲಿ ಪಂಡಿತ್ ಅವಧ್ ಬಿಹಾರಿ ಮಿಶ್ರಾ 1933ರಲ್ಲಿ ಸಣ್ಣ ಅಂಗಡಿಯನ್ನು ಪ್ರಾರಂಭಿಸಿದ್ದರು. ಅಲ್ಲಿ ಅವರು ತಯಾರಿಸುತ್ತಿದ್ದ ಪೇಡಾ ಹಲವು ವರ್ಷಗಳ ಬಳಿಕ ಧಾರವಾಡ ಪೇಡಾ ಎಂದೇ ಪ್ರಸಿದ್ಧವಾಯಿತು. ಅವರ ಪರಿಶ್ರಮದಿಂದ ಇದೀಗ ಈ ಕಂಪನಿ ಉನ್ನತ ಮಟ್ಟಕ್ಕೆ ಬೆಳೆದಿದೆ. ಸಾವಿರಾರು ಜನರಿಗೆ ಉದ್ಯೋಗ ನೀಡಿದೆ. ಈ ಪೇಡಾಗೆ ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಕೂಡ ಸಿಕ್ಕಿದೆ. ಈ ಸಂಗತಿಯನ್ನು ಹೆಮ್ಮೆಯಿಂದ ಹೇಳಿಕೊಳ್ಳುವ ಸಂಜಯ್ ಗಣೇಶ್ ಮಿಶ್ರಾ, ಕಾಲಕ್ಕನುಗುಣವಾಗಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸಿಹಿತಿಂಡಿಗಳನ್ನು ತಯಾರಿಸಲಾಗುತ್ತಿದೆ. ಭಾರತೀಯ ಸಿಹಿತಿನಿಸುಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ಭವಿಷ್ಯದಲ್ಲಿ ಹೈದ್ರಾಬಾದ್, ಚೆನ್ನೈ, ಮುಂಬೈ ಸೇರಿ ದೇಶದ ವಿವಿಧ ಪ್ರಮುಖ ನಗರಗಳಲ್ಲಿ ಲೈವ್ ಧಾರವಾಡ ಪೇಡಾದ ಮಳಿಗೆಗಳನ್ನು ಆರಂಭಿಸಲಾಗುವುದು ಎಂದರು.

ಸದ್ಯ ಧಾರವಾಡದ ಮುಖ್ಯ ಘಟಕದಲ್ಲಿ ತಯಾರಿಸಿ ರಾಜ್ಯದ ಎಲ್ಲ ಮಳಿಗೆಗಳಿಗೂ ಪೇಡಾ ಮತ್ತಿತರ ತಿನಿಸುಗಳನ್ನು ಸರಬರಾಜು ಮಾಡಲಾಗುತ್ತಿದೆ. ಆದರೆ, ಬೆಂಗಳೂರಿನ ಹೊಸ ಮಳಿಗೆಯಲ್ಲಿ ಸ್ಥಳದಲ್ಲೇ ಪೇಡಾ ತಯಾರಿಸಿ ಗ್ರಾಹಕರಿಗೆ ಕೊಡಲಾಗುತ್ತದೆ. ಸಿಹಿತಿನಿಸುಗಳ ಪಾಕವಿಧಾನ ಮತ್ತು ಗುಣಮಟ್ಟ ಪರೀಕ್ಷಿಸಲು ಗ್ರಾಹಕರು ಈ ಮಳಿಗೆಗೆ ಭೇಟಿ ನೀಡಬಹುದು.

| ಸಂಜಯ್ ಗಣೇಶ್ ಮಿಶ್ರಾ ಬಿಗ್ ಮಿಶ್ರಾ ಪೇಡಾ ಪ್ರೖೆ. ಲಿ. ಎಂಡಿ

ಬಿಗ್ ಮಿಶ್ರಾ ಕಂಪನಿಯ ಹೊಸ ಮಳಿಗೆಯಲ್ಲಿ ಸ್ಥಳದಲ್ಲೇ ಧಾರವಾಡ ಪೇಡಾ ತಯಾರಿಸಿ ಗ್ರಾಹಕರಿಗೆ ನೀಡುವ ಕ್ರಮ ಇಷ್ಟವಾಯಿತು. ಎಲ್ಲ ತಿನಿಸುಗಳು ತುಂಬಾ ರುಚಿಕರವಾಗಿವೆ.

| ಡಾ. ನಮಿತಾ ಕೊಹೊಕ್, ಕ್ಯಾನ್ಸರ್ ಗೆದ್ದ ಮಹಿಳೆ

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...