ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ವ್ಯಕ್ತಿಗಳಾಗಿ

ಶಹಾಬಾದ್: ಶಿಕ್ಷಣ ಕ್ಷೇತ್ರದಲ್ಲಿ ಪ್ರಾಥಮಿಕ ಹಂತ ಪ್ರಮುಖವಾಗಿದ್ದು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉತ್ತಮ ವ್ಯಕ್ತಿಗಳಾಗಬೇಕು ಎಂದು ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಹೇಳಿದರು.

ಹನುಮಾನ ನಗರದ ಆದಿ ಜಾಂಬವ ಕಲ್ಯಾಣ ಸಂಘದ ಕರ್ನಾಟಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಲ್ಕೋ ಸೋಲಾರ್ ಪ್ರೈವೇಟ್ ಲಿಮಿಟೆಡ್ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯಡಿ ಸಿದ್ಧವಾಗಿರುವ ಸ್ಮಾರ್ಟ್ ಕ್ಲಾಸ್‌ಗೆ ಭಾನುವಾರ ಚಾಲನೆ ನೀಡಿ ಮಾತನಾಡಿ, ಸಂಸ್ಥೆಯ ಬೇಡಿಕೆಯಂತೆ ಕೆಕೆಆರ್‌ಡಿಬಿ ಅನುದಾನದಲ್ಲಿ ಐದು ಕೋಣೆಗಳನ್ನು ಕಟ್ಟಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವೆ. ಸಣ್ಣಪುಟ್ಟ ಕೆಲಸಗಳಿಗಾಗಿ ಶಾಸಕರ ಅನುದಾನದಿಂದ ೫ ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು.

ಸೆಲ್ಕೋ ಸೋಲಾರ್ ಸಂಸ್ಥೆಯ ಕ್ಷೇತ್ರ ವ್ಯವಸ್ಥಾಪಕ ಯಲ್ಲಾಲಿಂಗ ದೊಡ್ಡಮನಿ ಮಾತನಾಡಿ, ಶಿಕ್ಷಣ, ಆರೋಗ್ಯ, ವ್ಯವಸಾಯದಲ್ಲಿ ಸೌರ ಶಕ್ತಿ ಬಳಸುವ ನಿಟ್ಟಿನಲ್ಲಿ ಸಂಸ್ಥೆ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ೪ ಸಾವಿರ ಶಾಲೆಗಳಲ್ಲಿ ಸೋಲಾರ್ ಸಂಚಾಲಿತ ಸ್ಮಾರ್ಟ್ ಕ್ಲಾಸ್‌ಗಳನ್ನು ಆರಂಭಿಸಲಾಗಿದೆ. ೮ ಲಕ್ಷ ಕುಟುಂಬಗಳಿಗೆ ಸೌರ ವಿದ್ಯುತ್ ಕಲ್ಪಿಸಲಾಗಿದೆ. ೭೨೦ ಆರೋಗ್ಯ ಕೇಂದ್ರಗಳಲ್ಲಿ ಸೌರ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಕೃಷ್ಣಮೂರ್ತಿ ಮಾತನಾಡಿ, ಚಿತ್ತಾಪುರ ತಾಲೂಕಿನಲ್ಲಿ ೧೮ ಹಿಂದುಳಿದ ಶಾಲೆಗಳ ಮಕ್ಕಳಿಗೆ ಡೆಸ್ಕ್ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ ಸಾಲ- ಸೌಲಭ್ಯ ಕಲ್ಪಿಸುವ ಮೂಲಕ ಮಹಿಳೆಯರನ್ನು ಸ್ವಾವಲಂಬಿಯನ್ನಾಗಿ ಮಾಡಲಾಗುತ್ತಿದೆ ಎಂದರು.

ಎಸ್.ಎಸ್.ದಿವಾಕರ್, ಯೋಗ ಗುರು ಮೋಹನ ಘಂಟ್ಲಿ, ಆದಿ ಜಾಂಬವ ಕಲ್ಯಾಣ ಸಂಘದ ಅಧ್ಯಕ್ಷ ಎ.ಎಚ್.ನಾಗೇಶ ಮಾತನಾಡಿದರು.

ಪ್ರಮುಖರಾದ ಎಚ್.ಎಸ್.ಮಟ್ಟಿ, ಲಕ್ಷ್ಮೀಬಾಯಿ, ಮಲ್ಲಿಕಾರ್ಜುನ ಚಟ್ನಳ್ಳಿ, ಅಣವೀರ ಇಂಗಿನಶೆಟ್ಟಿ, ಸೂರ್ಯಕಾಂತ ಕೋಬಾಳ, ಭೀಮರಾಯ ಮುದ್ನಾಳ, ಶರಣು ಪಗಲಾಪುರ, ಶಿವರಾಜ ಕೋರೆ, ಗುಂಡೇರಾವ್ ಇತರರಿದ್ದರು. ಬಾಲರಾಜ ಮಾಚನೂರ, ಡಾ.ಡಿ.ವಿ.ಅಂಗಡಿ, ನಾಗಪ್ಪ ಬೆಳಮಗಿ, ಶಿವಪುತ್ರ ಅವರನ್ನು ಸತ್ಕರಿಸಲಾಯಿತು. ಹುಲಿಗೆಮ್ಮ ಸಂಗಡಿಗರು ಪ್ರಾರ್ಥಿಸಿದರು. ಎಸ್.ಎನ್.ಹೊನಗುಂಟಿಕರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪಿ.ಎಸ್.ಕೊಕಟನೂರ ನಿರೂಪಣೆ ಮಾಡಿದರು. ಎಚ್.ಎಸ್.ಮಟ್ಟಿ ವಂದಿಸಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಹಾಗೂ ಸೆಲ್ಕೋ ಸೋಲಾರ್‌ನಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಅತ್ಯುತ್ತಮ ಕೆಲಸಗಳು ನಡೆಯುತ್ತಿವೆ. ಇವೆರಡು ಸಂಸ್ಥೆಗಳು ಕ್ಷೇತ್ರದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಒಂದಿಷ್ಟು ಒತ್ತು ನೀಡಬೇಕು, ನಿಮ್ಮ ಕಾರ್ಯಕ್ಕೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು.
| ಬಸವರಾಜ ಮತ್ತಿಮಡು, ಶಾಸಕ

Share This Article

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ