ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಕಾರ್ಯಕ್ರಮಕ್ಕೆ ಚಾಲನೆ

blank

ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಡಾನ್ ಬಾಸ್ಕೋ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2024 ತಂತ್ರಾಂಶ ಆವಿಷ್ಕಾರ ಕಾರ್ಯಕ್ರಮ ನಡೆಯಿತು.

ಪ್ರದಾನಿ ನರೇಂದ್ರ ಮೋದಿ ಕನಸಿನ ಕಾರ್ಯಕ್ರಮದ 7ನೇ ಗ್ರಾಂಡ್ ಫಿನಾಲೆಯು ರಾಷ್ಟ್ರವ್ಯಾಪಿ17 ವಿಷಯಗಳ ಕುರಿತು 51ನೊಡೆಲ್ ಸೆಂಟ್ರಲ್ನಲ್ಲಿ ಏಕಕಾಲದಲ್ಲಿ ಹಮ್ಮಿಕೊಳ್ಳಲಾಗಿತ್ತು. ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಹಾಗೂ ಎಐಸಿಟಿಇ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ವರ್ಚುವೆಲ್ ಮೂಲಕ ಉದ್ಘಾಟಿಸಿದರು. ಎಐಸಿಟಿಇ ನಿರ್ದೇಶಕ ನರೇಶ್ ಕುಮಾರ್ ಗ್ರೋವರ್ ಕಾಲೇಜು ಮಟ್ಟದಲ್ಲಿ ಉದ್ಘಾಟಿಸಿದರು.

ಈ ವೇಳೆ ಪ್ರಾಂಶುಪಾಲ ಡಾ.ಬಿ.ಎಸ್.ನಾಗಭೂಷಣ್ ಮಾತನಾಡಿ, ಡಾನ್ ಬಾಸ್ಕೋ ಕಾಲೇಜಿನಲ್ಲಿ ಹಲವು ಇಲಾಖೆಯ ಸಮಸ್ಯೆಗಳನ್ನು ಪಟ್ಟಿ ಮಾಡಿ ಈ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಿಕೊಡುವ ಹಾಗೂ ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಕ್ಷಮತೆ, ಜ್ಞಾನ ಶಕ್ತಿಯನ್ನು ಹೆಚ್ಚಿಸುವ ಸಲುವಾಗಿ ಮತ್ತು ಅವರಿಂದಲೇ ಈ ಸಮಸ್ಯೆಗಳಿಗೆ ಉತ್ತರ ಹುಡುಕುವ ಮೂಲಕ ಅವರು ಉದ್ಯಮಿಗಳಾಗಿ ಅಥವಾ ಸಂಶೋಧಕರಾಗಿ ರೂಪುಗೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳಾದ ಪೂಜಾ ರಾವತ್, ಡಿಕಿನ್ ಡ್ಯಾನಿ, ವಯನಮಾಕ್ ಸಂಸ್ಥೆ ಅಧ್ಯಕ್ಷ ಬೈರಪ್ಪ ,ಉಪಾಧ್ಯಕ್ಷ ಬಿ.ಮಂಜುನಾಥ್ ,ಕಾರ್ಯದರ್ಶಿ ರಾಘವ ಬೈಲಪ್ಪ ಮತ್ತಿತರರು ಪಾಲ್ಗೊಂಡಿದ್ದರು.

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿದೇಶಿಯರ ಕಲರವ

Share This Article

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…

ಡಯಟ್ ಸೋಡಾ ಕುಡಿಯಲು ಇಷ್ಟಪಡುತ್ತೀರಾ?; ಹಾಗಾದ್ರೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ ಇದು.. | Health Tips

ನಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಜನರು ಸಾಮಾನ್ಯ ಸೋಡಾಕ್ಕಿಂತ ಡಯಟ್ ಸೋಡಾ ಕುಡಿಯಲು…