ಯಲಹಂಕ : ಯಲಹಂಕ ಕ್ಷೇತ್ರದ ಆವಲಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಗಂಗೆ ಕಾಮಗಾರಿ, ರಾಜಾನುಕುಂಟೆ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಮತ್ತು ಹೆಸರಘಟ್ಟದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಆರ್.ವಿಶ್ವನಾಥ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಅಭಿವೃದ್ಧಿಯೇ ಮೂಲ ಎಂಬ ಆಶಯದೊಂದಿಗೆ ಅನುದಾನದ ಕೊರತೆಯ ನಡುವೆಯೂ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ಕುಂಟಿತವಾಗದಂತೆ ಶ್ರಮಿಸಲಾಗುತ್ತಿದೆ. ಇಂದು ಕ್ಷೇತ್ರದ ಆವಲಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಮನೆ ಮನೆಗೆ ಗಂಗೆ ಪೈಪ್ ಲೈನ್ ಅಳವಡಿಕೆ ಕಾಮಗಾರಿ, ರಾಜಾನುಕುಂಟೆ ಗ್ರಾಮದ ಪಾರ್ವತಿಪುರದ ಶನೈಶ್ವರ ದೇವಾಲಯ ರಸ್ತೆಗೆ ಕಾಂಕ್ರೀಟ್ ಕಾಮಗಾರಿ, ಹೆಸರಘಟ್ಟದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದ ಎಲ್ಲ ಗ್ರಾಮಗಳ ಅಭಿವೃದ್ಧಿಯ ಅಗತ್ಯತೆ ನೋಡಿಕೊಂಡು ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
ಮೇ 3ರಂದು ಯಲಹಂಕ ಮಿನಿ ವಿಧಾನಸೌಧದ ಮುಂದೆ ನಿರ್ಮಾಣಗೊಂಡಿರುವ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮವಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು, ವಿವಿಧ ಸಚಿವರು ಆಗಮಿಸಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಜನತೆಗೆ ಶಾಸಕರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್ ಎನ್ ರಾಜಣ್ಣ, ಡಿ.ಜಿ.ಅಪ್ಪಯ್ಯಣ್ಣ, ಚೊಕ್ಕನಹಳ್ಳಿ ವೆಂಕಟೇಶ್, ಎನ್.ಡಿ.ಜಗದೀಶ್, ರಾಜಾನುಕುಂಟೆ ಗ್ರಾ.ಪಂ.ಅಧ್ಯಕ್ಷೆ ಭವಾನಿ ಶ್ರೀನಿವಾಸ್, ಮಾಜಿ ಅಧ್ಯಕ್ಷರಾದ ಎಸ್.ಜಿ.ನರಸಿಂಹ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.