20.3 C
Bangalore
Sunday, December 15, 2019

ಸಂಪುಟದಿಂದ ಕಾನೂನು ಸಚಿವರನ್ನು ಕೈಬಿಡಲು ಒತ್ತಾಯ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ವಿಜಯಪುರ: ರಾಜ್ಯ ಸರ್ಕಾರದಲ್ಲಿ ಸಂಪುಟ ದರ್ಜೆಯ ಕಾನೂನು ಹಾಗೂ ಸಂಸದೀಯ ಸಚಿವರಾದ ಮಾದುಸ್ವಾಮಿವರು ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದ ಸ್ವಾಮಿಗಳನ್ನು ಏಕವಚನದಲ್ಲಿ ನಿಂದಿಸಿ ಅವಮಾನಿಸಿದ್ದಲ್ಲದೆ, ಹುಳಿಯಾರು ಪಟ್ಟಣದ ಕನಕದಾಸರ ವೃತ್ತವನ್ನು ಭಗ್ನಗೊಳಿಸಿದ ಕ್ರಮ ಖಂಡಿಸಿ ರಾಯಣ್ಣ ಯುವಸೇನೆ ಪ್ರತಿಭಟಿಸಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ಪದಾಧಿಕಾರಿಗಳು ಮಾದುಸ್ವಾಮಿ ವಿರುದ್ಧ ಹರಿಯಾಯ್ದರು.
ರಾಯಣ್ಣ ಯುವ ಸೇನೆ ಅಧ್ಯಕ್ಷ ದೇವಕಾಂತ ಬಿಜ್ಜರಗಿ ಮಾತನಾಡಿ, ಕನಕ ಪೀಠದ ಈಶ್ವರಾನಂದ ಪುರಿ ಸ್ವಾಮೀಜಿ ಕರೆದಿದ್ದ ಸಂದಾನ ಸಭೆಯಲ್ಲಿ ‘ನಾನು ನನ್ನ ಸಮುದಾಯಕ್ಕೆ ಮಾತ್ರ ನಾಯಕ, ರಾಜ್ಯದ ಕುರುಬರಿಗೆಲ್ಲ ಉತ್ತರ ಕೊಡಬೇಕಿಲ್ಲ, ಅದು ನನ್ನ ಇಷ್ಟ’ ಎಂದು ನಿಂದಿಸಿರುವುದು ಇಡೀ ಸಮಾಜವನ್ನು ಕೆರಳಿಸಿದೆ.
ಮಾದುಸ್ವಾಮಿ ಸಚಿವರಾಗುವಾಗ ಎಲ್ಲ ಸಮುದಾಯಗಳನ್ನು ಸಮಾನವಾಗಿ ನೋಡುವುದಾಗಿ, ಯಾವುದೇ ಪಕ್ಷಪಾತ ಮಾಡುವುದಿಲ್ಲವೆಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈಗ ನಾನು (ಲಿಂಗಾಯತ) ಸಮಾಜಕ್ಕೆ ಮಾತ್ರ ನಾಯಕ ಎಂದು ಅಹಂಕಾರದಿಂದ ಮೆರೆದಿದ್ದಾರೆ. ಸಚಿವ ಮಾಧುಸ್ವಾಮಿಯವರು ಪ್ರಮಾಣವಚನ ಸ್ವೀಕರಿಸುವಾಗ ಮಾಡಿದ ಪ್ರತಿಜ್ಞೆ ಉಲ್ಲಂಘಿಸಿದ್ದಾರೆ. ಅಲ್ಲದೇ ಕುರುಬ ಸಮಾಜದ ಸ್ವಾಮಿಗಳನ್ನು ಕನಿಷ್ಠವಾಗಿ ಕಂಡು ರಾಜ್ಯದ ಕುರುಬರಿಗೆ ಅವಮಾನಿಸಿದ್ದಾರೆ. ಕಾನೂನು ಮತ್ತು ಸಂಸದೀಯ ಸಚಿವರೇ ಕಾನೂನು ಉಲ್ಲಂಸಿದ್ದರಿಂದ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿದರು.
ರವಿ ಕಿತ್ತೂರ, ಚಂದ್ರಶೇಖರ ತೋಳಮಟ್ಟಿ, ಮೋಹನ ದಳವಾಯಿ, ಮನು ಭಾವಿಕಟ್ಟಿ, ಸದಾಶಿವ ಪೂಜಾರಿ, ಮಂಜು ಕುರಿಯವರ, ಸಿದ್ದು ಬಾವಿಕಟ್ಟಿ, ಶಂಕರ ಬೆಂಕಿ, ಶ್ರೀಶೈಲ ಬಿರಾದಾರ, ಬೀರಪ್ಪ ಪೂಜಾರಿ, ಕರೇಪ್ಪ ಬಸ್ತಾಳ, ವಿಠಲ ನಾಟಿಕಾರ, ಮಡ್ಡಿಸಿದ್ದ ಕುಮಟಗಿ ಸೇರಿದಂತೆ ಮತ್ತಿತರರು ಪಸ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...