More

    ಕಾನೂನು ಗಾಳಿಗೆ ತೂರಿದ ರಾಜ್ಯ ಸರ್ಕಾರ, ಕೊಟ್ಟೂರಿನಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಆರೋಪ

    ಕೊಟ್ಟೂರು: ನೆರೆ ಪರಿಹಾರ ವಿತರಣೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿಯ 25 ಸಂಸದರಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುವ ಧೈರ್ಯ ಮಾಡುತ್ತಿಲ್ಲ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ದೂರಿದರು.

    ಸೋಮವಾರ ಪಟ್ಟಣದ ಶ್ರೀ ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನೆರೆಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಚೋದನಾಕಾರಿ ಭಾಷಣ ಮಾಡಿದ ಬಳ್ಳಾರಿ ಶಾಸಕ ಸೋಮಶೇಖರರೆಡ್ಡಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಕೋರ್ಟ್‌ನಲ್ಲಿ ವಜಾ ಆಗಿದ್ದರೂ, ಪೊಲೀಸರು ಅವರನ್ನು ಬಂಧಿಸಿಲ್ಲ. ರಾಜಾರೋಷವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದನ್ನು ನೋಡಿದರೆ, ಬಿಜೆಪಿ ಸರ್ಕಾರ ಕಾಯ್ದೆ ಕಾನೂನುಗಳನ್ನು ಗಾಳಿಗೆ ತೂರಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದರು.

    ಶಾಸಕ ಸೋಮಶೇಖರರೆಡ್ಡಿ ಮನೆ ಮುಂದೆ ಪ್ರತಿಭಟನೆಗೆ ಆಗಮಿಸಿದ್ದ ಶಾಸಕ ಜಮೀರ್ ಅಹ್ಮದ್‌ಗೆ ಬಳ್ಳಾರಿಯ ಪಕ್ಷದ ಮುಖಂಡರು ಬೆಂಬಲ ನೀಡಲಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ ಇದು ಜಮೀರ್ ಅವರ ಸ್ವಂತ ವಿಚಾರ ಎಂದು ಹೇಳಿ ಉಗ್ರಪ್ಪ ಜಾರಿಕೊಂಡರು. ಜಿಪಂ ಸದಸ್ಯ ಹರ್ಷವರ್ಧನ್, ಕಾಂಗ್ರೆಸ್ ಜಿಲ್ಲಾ ವಕ್ತಾರ ಪತ್ರೇಶ, ಮಠದ ಧರ್ಮಕರ್ತ ಗಂಗಾಧರಯ್ಯ, ಎಪಿಎಂಸಿ ಅಧ್ಯಕ್ಷ ಬೂದಿ ಶಿವಕುಮಾರ್, ಮುಖಂಡರಾದ ಕನ್ನಾನಾಯಕ ಕಟ್ಟಿ, ಪ್ರದೀಪ್ ಪಾಟೀಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts