More

    ಮೆಟ್ರೋ ಬರುವಾಗ ಹಳಿಗೆ ಹಾರಿ ಪ್ರಾಣ ಬಿಟ್ಟ ವಿದ್ಯಾರ್ಥಿ ರುಂಡ -ಮುಂಡ ಛಿದ್ರ ಛಿದ್ರ

    ಬೆಂಗಳೂರು:  ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದಾಗಿ‌ 15 ನಿಮಿಷಕ್ಕೂ ಹೆಚ್ಚು ಸಮಯದಿಂದ ಮೆಟ್ರೋ ಓಡಾಟ ಸ್ಥಗಿತವಾಗಿದೆ.

    ಧ್ರುವ ಕಕ್ಕರ್ (20) ಮೃತ. ಯುವಕ ಮುಂಬೈ ಮೂಲದವನಾಗಿದ್ದು, ನ್ಯಾಷನಲ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ. ನ್ಯಾಷನಲ್ ಲಾ​ ಕಾಲೇಜಿನಲ್ಲಿ ಲಾ ಓದುತ್ತಿದ್ದನು. ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಟ್ರೈನ್ ಬರುವಾಗ ಹಳಿಗೆ ಜಿಗಿದು ಪ್ರಾಣಕಳೆದುಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

    ಇಂದು ಮದ್ಯಾಹ್ನ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಕ್ಕೆ ಬಂದ ಧ್ರುವಾ ಫೋನಿನಲ್ಲಿ ಮಾತನಾಡುತ್ತಿದ್ದನು. ಫೋನ್​ನಲ್ಲಿ ಮಾತನಾಡುತ್ತಿದ್ದಂತೆ ರೈಲು ಹಳಿಗೆ ಹಾರಿದ್ದಾನೆ. ಇನ್ನು ಹೈ ವೋಲ್ಟೇಜ್‌ ವಿದ್ಯುತ್ ಸಂಪರ್ಕ ಹಾಗೂ ಒಟ್ಟು 8 ಭೋಗಿಗಳನ್ನು ಹೊಂದಿದ ಟನ್‌ಗಟ್ಟಲೆ ಭಾರವಿರುವ ಮೆಟ್ರೋ ರೈಲು ಆತನ ದೇಹದ ಮೇಲೆ ಹರಿದಿದೆ. ಈ ವೇಳೆ ಯುವಕ ದೇಹ ಎರಡು ತುಂಡಾಗಿದೆ. ಯುವಕನ ರುಂಡ ಹಾಗೂ ಮುಂಡ ಇಬ್ಭಾಗವಾಗಿವೆ.

    ಯುವಕನನ್ನು ಕೂಡಲೇ ಅಲ್ಲಿದ್ದ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆತ ಮಾರ್ಗ ಮಧ್ಯೆದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೆಟ್ರೋ ಓಡಾಟವನ್ನು ಬಂದ್‌ ಮಾಡಿ ನಿಲ್ದಾಣದಲ್ಲಿದ್ದ ಎಲ್ಲ ಪ್ರಯಾಣಿಕರನ್ನು ಹೊರ ಕಳಿಸಿದ್ದಾರೆ.

    ಸ್ಥಳಕ್ಕೆ ವಿಜಯನಗರ ಪೊಲೀಸರು ಹಾಗೂ ಬಿಎಂಆರ್‌ಸಿಎಲ್‌ನ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮೆಟ್ರೋ ಬರುತ್ತಿದ್ದುದನ್ನು ಗಮನಿಸಿದ ವ್ಯಕ್ತಿ ಟ್ರ್ಯಾಕ್​ಗೆ ಹಾರಿದ್ದಾನೆ. ಪರಿಣಾಮ ಮೆಟ್ರೋಗೆ ಸಿಲುಕೊಂಡು ಮೃತಪಟ್ಟಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ .ಎಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಬಗ್ಗೆ ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ.

    ರೈಲ್ವೆ ಹಳಿಗೆ ಹಾರಿದ ಯುವಕನ ಮೃತ ದೇಹವನ್ನು ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ರೈಲ್ವೆ ಹಳಿಯಿಂದ ಹೊರಗೆ ತೆಗೆಯಲಾಗಿದೆ. ಆಗ ಮೃತ ಯುವಕ ಬಳಿ ಸಿಕ್ಕಿದ್ದ ಮೊಬೈಲ್ ಫೋನ್, ಪರ್ಸ್ ಹಾಗೂ ಅದರಲ್ಲಿದ್ದ ಗುರುತಿನ ಚೀಟಿಯನ್ನು ಪೊಲೀಸರು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಮೃತ ಯುವಕ ಬೆಂಗಳೂರು ಬಸವನಗುಡಿಯ ನ್ಯಾಷನಲ್ ಕಾಲೇಜು ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. ಇನ್ನು ಈ ವಿದ್ಯಾರ್ಥಿಯ ಹೆಸರು ಧೃವ ಕಕ್ಕರ್ (20) ಎಂದು ತಿಳಿದುಬಂದಿದೆ. ಆದರೆ, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು ತಿಳಿದುಬಂದಿಲ್ಲ.

    ಮೆಟ್ರೋ ಬರ್ತಿದ್ದಂತೆ ಟ್ರ್ಯಾಕ್​​ಗೆ ಜಿಗಿದ ವ್ಯಕ್ತಿ; ಸಾವು- ಬದುಕಿನ ಮದ್ಯೆ ಹೋರಾಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts