

ಉಡುಪಿ : ಹೆರ್ಗಾ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡಲು ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೂಲತ: ಕೇರಳ ರಾಜ್ಯದ ನಿವಾಸಿಗಳದ ನಿಭೀಷ್ 23 ವರ್ಷ, ಅಮಲ್ 22 ವರ್ಷ ಬಂಧಿತರು. ಇನ್ನೊಬ್ಬ ಆರೋಪಿ ಅಪ್ಸಿನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ವಿದ್ಯಾರ್ಥಿಗಳ ಬಳಿ 35 ಸಾವಿರ ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ (MDMA) ಮಾದಕ ದ್ರವ್ಯ ಪತ್ತೆಯಾಗಿದ್ದು, ಜೊತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.