ಕಾನೂನು ವಿವಿ ಮಟ್ಟದ ಫುಟ್‌ಬಾಲ್ ಪಂದ್ಯಾಟ

New Project (4)
Published on

ಸುಳ್ಯ: ಕರ್ನಾಟಕ ರಾಜ್ಯ ಕಾನೂನು ವಿವಿ, ಸುಳ್ಯ ಕೆವಿಜಿ ಕಾನೂನು ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿ.ವಿ ಮಟ್ಟದ ಫುಟ್‌ಬಾಲ್ ಟೂರ್ನಿ ಸುಳ್ಯದ ಕೆವಿಜಿ ಮೈದಾನದಲ್ಲಿ ನಡೆಯಿತು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸತೀಶ್‌ಕುಮಾರ್ ಕೆ.ಆರ್. ಉದ್ಘಾಟಿಸಿದರು. ಅಕಾಡೆಮಿ ಆಫ್ ಲಿಬರಲ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಟೂರ್ನಿಗೆ ಚಾಲನೆ ನೀಡಿದರು. ಕೆವಿಜಿ ಕಾನೂನು ಮಹಾವಿದ್ಯಾಲಯ ಆಡಳಿತಾಧಿಕಾರಿ ಪ್ರೊ.ಕೆ.ವಿ.ದಾಮೋದರ ಗೌಡ, ಪ್ರಾಂಶುಪಾಲ ಡಾ.ಉದಯ ಕೃಷ್ಣ ಬಿ., ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ್ ನಾಯ್ಕ ಭಟ್ಕಳ, ಉಪನ್ಯಾಸಕಿ ರಶ್ಮಿ ಮೊದಲಾದವರು ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ.ಉದಯ ಕೃಷ್ಣ ಬಿ. ಸ್ವಾಗತಿಸಿದರು. ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ. ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ನಯನಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net