

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪತ್ರ ಬಂದಿದ್ದು, ಇದರಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಕೈವಾಡ ಇಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಪಂಜಾಬ್ ಖ್ಯಾತ ಗಾಯಕ ಹಾಗೂ ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು, ಈ ಬೆನ್ನಲ್ಲೇ ಬೆದರಿಕೆ ಪತ್ರಗಳು ಬಂದಿದ್ದವು. ಇದರಿಂದ ಎಚ್ಚೆತ್ತ ಮುಂಬೈ ಪೊಲೀಸರು ಸಲ್ಮಾನ್ ಖಾನ್ ನಿವಾಸಕ್ಕೆ ಹೆಚ್ಚಿನ ಭದ್ರತೆಯನ್ನು ಹಾಕಿದ್ದರು.
ಇದೀಗ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ದಿಲ್ಲಿ ಪೊಲೀಸರು, ಬಂಧನದಲ್ಲಿರುವ ಲಾರೆನ್ಸ್ ಬಿಷ್ಣೋಯಿ ಕೈವಾಡವಿದೆಯೇ ಎಂಬ ಬಗ್ಗೆ ನಡೆಸಿದ ಸಮಗ್ರ ತನಿಖೆಯಲ್ಲಿ ಈತನ ಕೈವಾಡವಿಲ್ಲ ಎಂದು ತಿಳಿದುಬಂದಿದೆ.
ಸಲ್ಮಾನ್ ಖಾನ್ಗೆ ಬೆದರಿಕೆ ಪತ್ರದ ಬಗ್ಗೆ ತನಗೇನೂ ಗೊತ್ತಿಲ್ಲ, ಇದರಲ್ಲಿ ಯಾರ ಕೈವಾಡವಿದೆ ಎಂಬುದೂ ನನಗೆ ತಿಳಿದಿಲ್ಲ ಎಂದು ಬಿಷ್ಣೋಯಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ.
ಇದಕ್ಕೆ ಕಾರಣ, ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಲಾರೆನ್ಸ್ ಬಿಷ್ಣೋಯ್ ಪ್ರಮುಖ ಆರೋಪಿಯಾಗಿದ್ದು, ಈತ ಈ ಹಿಂದೆ ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡಲು ಬಿಷ್ಣೋಯ್ ಸಂಚು ರೂಪಿಸಿದ್ದರಿಂದ ಈತನ ಮೇಲೆ ಅನುಮಾನ ವ್ಯಕ್ತವಾಗಿತ್ತು.
2018ರಲ್ಲಿ ರಾಜಸ್ಥಾನದಲ್ಲಿ ಕೃಷ್ಣಮೃಗ ಬೇಟೆ ಆಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಜೈಲಿಗೆ ಹೋಗಿದ್ದರು. ಈ ಸಮಯದಲ್ಲಿ ಕೋರ್ಟ್ ಹೊರಗೆ ಮಾತನಾಡಿದ್ದ ಬಿಷ್ಣೋಯ್, ಸಲ್ಮಾನ್ ಖಾನ್ನನ್ನು ಕೊಲ್ಲುತ್ತೇವೆ ಎಂದು ಹೇಳಿಕೆ ನೀಡಿದ್ದ. ಆದ್ದರಿಂದ ಈತನನ್ನು ವಿಚಾರಣೆಗೊಳಪಡಿಸಿದಾಗ ಈತನು ಇದರಲ್ಲಿ ಭಾಗಿಯಾಗಿಲ್ಲ ಎಂದು ತಿಳಿದುಬಂದಿದೆ ಎಂಬ ವರದಿಯನ್ನು ದೆಹಲಿ ಪೊಲೀಸರು ನೀಡಿದ್ದಾರೆ. (ಏಜೆನ್ಸೀಸ್)