More

  ಇದು ಬರೀ ಟ್ರೈಲರ್ ಅಷ್ಟೇ..; ನಟ ಸಲ್ಮಾನ್ ಮನೆ ಮೇಲೆ ದಾಳಿ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್

  ಮುಂಬೈ: ಬಾಲಿವುಡ್​ ನಟ ಸಲ್ಮಾನ್​ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್​ಮೆಂಟ್​ ಎದುರು ಭಾನುವಾರ ನಡೆದ ದಾಳಿಯ ಹೊಣೆಯನ್ನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ವಹಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

  ಇದನ್ನೂ ಓದಿ: ಕೆನಡಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವು: 24 ವರ್ಷದ ವಿದ್ಯಾರ್ಥಿಯನ್ನು ಗುಂಡಿಕ್ಕಿ ಹತ್ಯೆ

  ಲಾರೆನ್ಸ್ ಸಹೋದರ ಭಾರತದ ಮೋಸ್ಟ್ ವಾಟೆಂಡ್​ ಅನ್ಮೋಲ್ ಬಿಷ್ಣೋಯ್ ಸದ್ಯ ಅಮೆರಿಕದಲ್ಲಿ ತಲೆಮರೆಸಿಕೊಂಡಿದ್ದಾರೆ. ನಟ ಸಲ್ಮಾನ್ ಮನೆಯ ಎದುರು ನಡೆದ ಗುಂಡಿನ ದಾಳಿಯ ಹೊಣೆ ಹೊತ್ತಿದ್ದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ.

  ಇದಲ್ಲದೆ ಸಲ್ಮಾನ್ ಖಾನ್​ ಅವರಿಗೆ ಟ್ರೇಲರ್​ ತೋರಿಸುವುದಕ್ಕಾಗಿ ನಾವು ಈ ಗುಂಡಿನ ದಾಳಿ ಮಾಡಿದ್ದೇವೆ ಎಂದು ಹೇಳಿದ್ದಾರೆ. ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಎದುರು ದುಷ್ಕರ್ಮಿಗಳು ಮುಂಜಾನೆ 5 ಗಂಟೆ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಹಲವು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

  ಇದು ಬರೀ ಟ್ರೈಲರ್ ಅಷ್ಟೇ..; ನಟ ಸಲ್ಮಾನ್ ಮನೆ ಮೇಲೆ ದಾಳಿ ಹೊಣೆ ಹೊತ್ತ ಬಿಷ್ಣೋಯಿ ಗ್ಯಾಂಗ್

  ಮನೆಯ ಹೊರಗೆ ಗುಂಡು ಹಾರಿಸುವುದಿಲ್ಲ: ನಟ ಸಲ್ಮಾನ್ ಮನೆಗೆ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಅನ್ಮೋಲ್ ಬಿಷ್ಣೋಯ್ ಹೆಸರಿನಲ್ಲಿ ಮಾಡಿರುವ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದು ನಿಮಗೆ ಎಚ್ಚರಿಕೆ. ನಮಗೆ ಶಾಂತಿ ಬೇಕು. ದಬ್ಬಾಳಿಕೆಯ ವಿರುದ್ಧದ ಏಕೈಕ ನಿರ್ಧಾರ ಯುದ್ಧವಾಗಿದ್ದರೆ ಆಗಲಿ. ಸಲ್ಮಾನ್ ಖಾನ್ ನಿಮಗೆ ಟ್ರೇಲರ್ ಅನ್ನು ತೋರಿಸಿದ್ದೇವೆ. ಇದರಿಂದ ನೀವು ನಮ್ಮ ಶಕ್ತಿಯ ಸಾಮರ್ಥ್ಯವನ್ನು ಅರ್ಥಮಾಡಿಕೊಳ್ಳುತ್ತೀರಿ ಎಂದು ಭಾವಿಸಿದ್ದೇವೆ. ಜೊತೆಗೆ ನಮ್ಮನ್ನು ನೀವು ಪರೀಕ್ಷಿಸಬೇಡಿ. ಇದು ಮೊದಲ ಮತ್ತು ಕೊನೆಯದು. ಇದರ ನಂತರ ಮನೆಯ ಹೊರಗೆ ಗುಂಡು ಹಾರಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

  ಸಿಧು ಮೂಸೆವಾಲಾ ಹತ್ಯೆಯಲ್ಲೂ ಆತನ ಕೈವಾಡವಿತ್ತು?: ಬಾಲಿವುಡ್ ನಟನ ಮನೆಯ ಹೊರಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಹೆಚ್ಚಿನ ತನಿಖೆಗಾಗಿ ಅಪರಾಧ ವಿಭಾಗ, ಸ್ಥಳೀಯ ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಖಾನ್ ಅವರ ಮನೆಯ ಹೊರಗೆ ಹಾರಿಸಲಾದ ಗುಂಡುಗಳ ಶೆಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಮತ್ತು ವಾಂಟೆಡ್ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಈ ಹಿಂದೆ ಹಲವಾರು ಬಾರಿ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲೂ ಆತನ ಕೈವಾಡವಿತ್ತು ಎನ್ನಲಾಗಿದೆ.

  ಅನ್ಮೋಲ್ ಬಿಷ್ಣೋಯ್ ಅಲಿಯಾಸ್ ಭಾನು ಮೂಸ್ ವಾಲಾ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ. ಅವರು ನಕಲಿ ಪಾಸ್‌ಪೋರ್ಟ್‌ನಲ್ಲಿ ಭಾರತದಿಂದ ಪರಾರಿಯಾಗಿದ್ದರು ಮತ್ತು ಕಳೆದ ವರ್ಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಿಂದ ಚಾರ್ಜ್‌ಶೀಟ್ ದಾಖಲಿಸಿದ್ದರು.
  ಅನ್ಮೋಲ್ ಬಿಷ್ಣೋಯ್ ನಿರಂತರವಾಗಿ ತನ್ನ ಸ್ಥಳಗಳನ್ನು ಬದಲಾಯಿಸುತ್ತಿದ್ದಾನೆ. 2023 ರಲ್ಲಿ, ಅವರು ಕೀನ್ಯಾದಲ್ಲಿ ಕಾಣಿಸಿಕೊಂಡಿದ್ದರು ಎಂದು ವರದಿಯಾಗಿತ್ತು.

  ಸಲ್ಮಾನ್ ಖಾನ್ ಅವರಿಗೆ ವೈಯಕ್ತಿಕ ಶಸ್ತ್ರಾಸ್ತ್ರ ಪರವಾನಗಿಯನ್ನು ಸಹ ಒದಗಿಸಲಾಗಿದೆ ಮತ್ತು ಅವರು ತಮ್ಮ ಸುರಕ್ಷತೆಗಾಗಿ ವೈಯಕ್ತಿಕ ಆಯುಧವನ್ನು ಹೊಂದಬಹುದು. ಭಾನುವಾರ ಮುಂಜಾನೆ ನಡೆದ ಗುಂಡಿನ ದಾಳಿ ನಡೆದಾಗ ಸಲ್ಮಾನ್ ಖಾನ್ ಅವರು ಮನೆಯಲ್ಲಿದ್ದರು ಎಂದು ಮುಂಬೈ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

  IPL 2024: ಪಂಜಾಬ್​ ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರನಿಗೆ ಗಾಯ..! ತಂಡದಿಂದ ಹೊರಕ್ಕೆ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts