17.8 C
Bengaluru
Wednesday, January 22, 2020

ಸುಪ್ರೀಂಗೆ ಅಡಕೆ ಬಗ್ಗೆ ವೈಜ್ಞಾನಿಕ ವರದಿ, ಟಾಸ್ಕ್​ಫೋರ್ಸ್​ನಿಂದಲೂ ವಕೀಲರ ನೇಮಕ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಸಾಗರ: ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ ಅಡಕೆ ಟಾಸ್ಕ್​ಫೋರ್ಸ್ ಸಭೆಯಲ್ಲಿ ಅಡಕೆ ಹಾನಿಕಾರಕವಲ್ಲ, ಅದರಲ್ಲಿ ಔಷಧೀಯ ಅಂಶ ಇದೆ ಎನ್ನುವ ಕುರಿತು ವೈಜ್ಞಾನಿಕ ವರದಿ ತಯಾರಿಸಿ ಅದನ್ನು ಸುಪ್ರೀಂಕೋರ್ಟ್​ಗೆ ಸಲ್ಲಿಸುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.

ನಗರದ ವಿಜಯನಗರ ಬಡಾವಣೆಯಲ್ಲಿ ಶನಿವಾರ ನಗರಸಭೆಯಿಂದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಪ್ರಸ್ತುತ ಸುಪ್ರೀಂಕೋರ್ಟ್​ನಲ್ಲಿ ಅಡಕೆ ಹಾನಿಕಾರಕ ಎನ್ನುವ ವರದಿ ಬಗ್ಗೆ ಚರ್ಚೆ ನಡೆಯುತ್ತಿದೆ. ಜನವರಿ ತಿಂಗಳಿನಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈಗಾಗಲೇ ಕ್ಯಾಂಪ್ಕೋ, ಮ್ಯಾಮ್ಕೋಸ್, ತುಮ್ಕೋಸ್ ಸೇರಿ ವಿವಿಧ ಬೆಳೆಗಾರ ಪರ ಸಂಘಟನೆಗಳು ಸಮರ್ಥ ನ್ಯಾಯವಾದಿಗಳನ್ನು ಇರಿಸಿ ಅಡಕೆ ಹಾನಿಕಾರವಲ್ಲ ಎನ್ನುವ ಕುರಿತು ವಾದ ಮಂಡಿಸುತ್ತಿವೆ. ಟಾಸ್ಕ್​ಫೋರ್ಸ್​ನಿಂದಲೂ ಓರ್ವ ಹಿರಿಯ ವಕೀಲರನ್ನು ನೇಮಕ ಮಾಡುವ ಉದ್ದೇಶ ಹೊಂದಲಾಗಿದೆ ಎಂಬ ಮಾಹಿತಿ ನೀಡಿದರು.

ಅಡಕೆ ಕೊಳೆರೋಗಕ್ಕೆ ಪರಿಹಾರ ನೀಡುವುದು, ಅಡಕೆ ಬೆಳೆಗಾರರ ಹಿತರಕ್ಷಣೆ ಸೇರಿ ಬೇರೆಬೇರೆ ವಿಷಯಗಳ ಬಗ್ಗೆ ಟಾಸ್ಕ್​ಫೋರ್ಸ್​ನಲ್ಲಿ ಚರ್ಚೆ ನಡೆದಿದ್ದು, ಏಕಕಾಲದಲ್ಲಿ ಎಲ್ಲವನ್ನೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. ಆರಂಭದಲ್ಲಿ ನಮ್ಮ ಬೆಳೆಗಾರರ ತಲೆಯ ಮೇಲೆ ತೂಗುತ್ತಿರುವ ಅಡಕೆ ಹಾನಿಕಾರಕ ಎನ್ನುವ ಕತ್ತಿಯನ್ನು ತೆಗೆಯಲು ಮೊದಲ ಆದ್ಯತೆ ನೀಡಲಾಗುತ್ತದೆ. ಬೆಳೆಗಾರರ ಸಂಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸುತ್ತದೆ. ಯಾವತ್ತೂ ಜತೆಗಿದ್ದೇವೆ ಎಂದು ಅಭಯ ನೀಡಿದರು.

ಸಾಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೋರಿದ್ದು ತುರ್ತು ಸರ್ಕಾರದಿಂದ 10 ಕೋಟಿ ಹಣ ನೀಡಲಾಗಿದೆ. ಒಂದಷ್ಟು ಅಭಿವೃದ್ಧಿ ಕೆಲಸವೂ ಮುಂದಿನ ಮೂರ್ನಾಲ್ಕು ತಿಂಗಳಿನಲ್ಲಿ ನಾಗಾಲೋಟದಲ್ಲಿ ನಡೆಯಲಿದೆ. ಕೆಲವು ಕಾಮಗಾರಿಗಳು ಪ್ರಾರಂಭವಾಗಿದೆ. ಹಾಳಾಗಿರುವ ರಸ್ತೆಗಳನ್ನು ತುರ್ತು ಸರಿಪಡಿಸಲಾಗುತ್ತಿದೆ. ಬರುವ ಫೆಬ್ರವರಿಯಲ್ಲಿ ಮಾರಿಕಾಂಬಾ ಜಾತ್ರೆ ನಡೆಯಲಿದ್ದು ಸಾಗರದ ಪ್ರಮುಖ ರಸ್ತೆಗಳನ್ನು ಸುಸಜ್ಜಿತಗೊಳಿಸಲಾಗುತ್ತಿದೆ ಎಂದರು.

ಮುಂದಿನ ಕ್ಯಾಬಿನೆಟ್​ನಲ್ಲಿ ಅಂತಿಮ: ಕಳೆದ ವರ್ಷ ನಮ್ಮ ಪ್ರದೇಶದ ಜನರು ಮಂಗನ ಕಾಯಿಲೆ ಸಂಕಷ್ಟದಿಂದ ಸಾವು-ನೋವು ಉಂಡಿದ್ದಾರೆ. ಈ ಸಮಸ್ಯೆಯನ್ನು ಬೇರು ಸಹಿತ ಕಿತ್ತುಹಾಕಲು ಸಾಗರದಲ್ಲಿಯೇ ಮಂಗನ ಕಾಯಿಲೆ ಸಂಶೋಧನಾ ಕೇಂದ್ರ ಆರಂಭವಾಗಬೇಕು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದೇನೆ ಎಂದು ಶಾಸಕ ಎಚ್. ಹಾಲಪ್ಪ ಹೇಳಿದರು. ಮಂಗನ ಕಾಯಿಲೆಗೆ ಸಂಬಂಧಪಟ್ಟ ಸಂಶೋಧನಾ ಕೇಂದ್ರ ಸಾಗರದಲ್ಲಿ ಆರಂಭಿಸಬೇಕು ಮತ್ತು ಇಲ್ಲಿಯೇ ಆರಂಭಿಸಲು ಅದರ ಮಹತ್ವವೇನು ಎಂಬುದರ ಬಗ್ಗೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಮನವರಿಕೆ ಮಾಡಿದ್ದೇನೆ. ಸದ್ಯದಲ್ಲಿಯೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಣಯ ಕೈಗೊಂಡು ಸಾಗರದಲ್ಲಿಯೆ ಮಂಗನ ಕಾಯಿಲೆ ಸಂಶೋಧನಾ ಘಟಕ ಸ್ಥಾಪನೆಗೆ ಚಾಲನೆ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...