More

  ಮಾದಕ ವ್ಯಸನಕ್ಕೆ ಬಲಿಯಾಗದಿರಿ

  ಯಾದಗಿರಿ: ಮಾದಕ ವಸ್ತುಗಳಿಗೆ ಬಲಿಯಾದರೆ ಜೀವನವಿಡೀ ಸಂಕಷ್ಟಕ್ಕೆ ಗುರಿಯಾಗುವುದಲ್ಲದೆ ಅವರ ಕುಟುಂಬ ಕೂಡ ಸಮಸ್ಯೆ ಎದುರಿಸಬೇಕಾಗುತ್ತದೆ. ಆರೋಗ್ಯಕರ ಜೀವನಕ್ಕಾಗಿ ಪ್ರತಿಯೊಬ್ಬರೂ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ್ ಸಲಹೆ ನೀಡಿದರು.

  ಶುಕ್ರವಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಇಲಾಖೆ (ಮಾನಸಿಕ ವಿಭಾಗ) ಸಹಯೋಗದಡಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಣೆ ವಿರೋಧಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

  ಸದ್ಯದ ಪರಿಸ್ಥಿತಿಯಲ್ಲಿ ಕರೊನಾ ವೈರಸ್ ಮಹಾಮಾರಿ ಎಂದು ಹೇಳುತ್ತೇವೆ. ಆದರೆ ಮನುಷ್ಯನಿಗೆ ಕರೊನಾಗಿಂತ ಮಾದಕ ವಸ್ತುಗಳಿಗೆ ದಾಸರಾಗುವುದು ಅತ್ಯಂತ ಅಪಾಯಕಾರಿ ಎನಿಸಿದೆ. ಸ್ವಇಚ್ಛೆಯಿಂದ ನಿಧರ್ಾರ ಕೈಗೊಂಡಾಗ ಮಾತ್ರ ವ್ಯಸನಮುಕ್ತರಾಗಲು ಸಾಧ್ಯ ಎಂದರು.

  ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್ ವಜ್ಜಲ್ ಮಾತನಾಡಿ, ಪ್ರತಿಯೊಬ್ಬರಿಗೂ ಅವರವರ ಜೀವನದಲ್ಲಿ ತಮ್ಮದೇ ಆದ ಮಾನಸಿಕ ಒತ್ತಡಗಳಿರುತ್ತವೆ. ಒತ್ತಡದ ನೆಪದಲ್ಲಿ ಮಾದಕ ವಸ್ತುಗಳಿಗೆ ಅಂಟಿಕೊಳ್ಳುವುದು ತಪ್ಪು. ಇತ್ತೀಚೆಗೆ ಮಕ್ಕಳು ಕೂಡ ಗುಟ್ಖಾ ಸೇವನೆ ಮಾಡುತ್ತಿದ್ದಾರೆ. ಇದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.

  ಮಾದಕ ವಸ್ತುಗಳ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ, ದೇಶದ ಪ್ರಗತಿ ಮೇಲೂ ಮಾರಕ ಪರಿಣಾಮ ಬೀರಲಿದೆ. ಮಾದಕ ವಸ್ತುಗಳ ಮಾರಾಟ, ಸಾಗಣೆ ಹೆಚ್ಚಳದಿಂದ ಹೆಚ್ಚಿನ ಜನ ಬಲಿಯಾಗುತ್ತಿದ್ದಾರೆ. ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು, ಸದೃಢ ದೇಶಕ್ಕಾಗಿ ಶ್ರಮಿಸಬೇಕು. ಆರೋಗ್ಯಯುತ ದೇಶದ ನಿಮರ್ಾಣದಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದರು.

  ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ.ಭಗವಂತ ಅನವಾರ ಮಾತನಾಡಿ, 1989ರಿಂದ ಪ್ರತಿವರ್ಷ ಜೂನ್ 26 ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನವನ್ನು ಒಂದೊಂದು ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಪ್ರಸಕ್ತ ವರ್ಷ ಉತ್ತಮ ಆರೈಕೆಗಾಗಿ ಉತ್ತಮ ಜ್ಞಾನ ಎಂಬ ಘೋಷವಾಕ್ಯ ಇದೆ. ಮಾದಕ ವಸ್ತುಗಳ ವ್ಯಸನದಿಂದ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಅಂಶಗಳ ಮೇಲೆ ಪರಿಣಾಮ ಬೀರುತ್ತದೆ. ಸೋಮಾರಿಗಳು ಹೆಚ್ಚಾಗಿ ತುತ್ತಾಗುತ್ತಾರೆ ಎಂದು ಕಳವಳ ವ್ಯಕ್ತಪಡಿಸಿದರು.

  See also  ನಿತ್ಯ ಅಭ್ಯಾಸ ಮಾಡಿ ಉತ್ತಮ ಕ್ರೀಡಾಪಟುವಾಗಿ, ವಿದ್ಯಾರ್ಥಿಗಳಿಗೆ ಕಂಪ್ಲಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಕೆ.ಯರ‌್ರಿಸ್ವಾಮಿ ಸಲಹೆ

  ಜಿಪಂ ಉಪಾಧ್ಯಕ್ಷೆ ಗಿರಿಜಮ್ಮ ರೊಟ್ನಡಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಲಿಂಗಪ್ಪ ಪುಟಗಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಂ.ಎಸ್. ಪಾಟೀಲ್, ಮನೋವೈದ್ಯ ಡಾ.ಉಮೇಶ, ಪ್ರಭಾರ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ.ನೀಲಮ್ಮ ಎಸ್.ರೆಡ್ಡಿ, ಡಾ.ಜಯಕುಮಾರ, ನಂದಣ್ಣ ಪಾಟೀಲ್, ಶರಣಬಸವ ಹೊಸಮನಿ ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts