25.9 C
Bengaluru
Wednesday, January 22, 2020

ವಕೀಲರಿಗಿದೆ ಸಮಾಜ ತಿದ್ದುವ ಶಕ್ತಿ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ತುಮಕೂರು: ವಕೀಲರಿಗೆ ದೇಶ ಹಾಗೂ ಸಮಾಜವನ್ನು ತಿದ್ದುವ ಶಕ್ತಿ ಇದ್ದು, ಅವರು ಸಮಾಜದಲ್ಲಿ ವೈದ್ಯರು ಇದ್ದಂತೆ ಎಂದು ಹೈಕೋರ್ಟ್ ನ್ಯಾಯಮೂರ್ತಿಯೂ ಆದ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಅರವಿಂದಕುಮಾರ್ ಹೇಳಿದರು.

ನಗರದ ಜಿಲ್ಲಾ ವಕೀಲರ ಭವನದ 2ನೇ ಮಹಡಿಯಲ್ಲಿ ಜಿಲ್ಲಾ ವಕೀಲರ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ವಕೀಲರ ಕುಂದುಕೊರತೆ ಆಲಿಸಿ ಮಾತನಾಡಿದ ಅವರು, ವಕೀಲರು ಶಿಲ್ಪಿ ಇದ್ದಂತೆ. ಶಿಲ್ಪಿ ಹೇಗೆ ಒಂದು ಕಲ್ಲನ್ನು ಕೆತ್ತಿ ಸುಂದರಮೂರ್ತಿಯನ್ನಾಗಿ ಮಾಡುತ್ತಾನೋ ಅದೇ ರೀತಿ ವಕೀಲರು ಸಮಾಜವನ್ನು ತಿದ್ದಿ ತೀಡಿ ಒಂದು ರೂಪ ಕೊಡಲು ಶ್ರಮಿಸುತ್ತಾರೆ ಎಂದರು.

ವೃತ್ತಿಯಲ್ಲಿ ಪ್ರಾವೀಣ್ಯತೆ ಪಡೆಯಲು ಯುವ ವಕೀಲರು ಪರಿಶ್ರಮದಿಂದ ಅಧ್ಯಯನ ನಡೆಸಬೇಕು. ಆಗ ವಕೀಲ ವೃತ್ತಿಯಲ್ಲಿ ಪರಿಪಕ್ವತೆ ಸಾಧಿಸಲು ಸಾಧ್ಯವಾಗುತ್ತದೆ. ಹಿರಿಯ ವಕೀಲರು, ಅನುಭವಿಗಳ ಮಾರ್ಗದರ್ಶನ ಕೂಡ ಅಗತ್ಯ. ಸಂಸತ್‌ನಲ್ಲಿ ಪ್ರಸ್ತುತ ಶೇ. 67 ಮಂದಿ ಸದಸ್ಯರು ವಕೀಲರೇ ಇದ್ದಾರೆ ಎಂದು ಹೇಳಿದರು.

ಡಿಸಿ ಜತೆ ಸಭೆ: ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿನ ವಕೀಲರ ಸಮಸ್ಯೆ ಹಾಗೂ ನ್ಯಾಯಾಲಯ ಸಂಕೀರ್ಣಗಳಲ್ಲಿನ ಸಮಸ್ಯೆಗಳ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಲಾಗಿದೆ.

ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗಿದೆ ಎಂದರು. ಜಿಲ್ಲೆಯ ನ್ಯಾಯಾಲಯ ಸಂಕೀರ್ಣಗಳಲ್ಲಿರುವ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಆಡಳಿತಾತ್ಮಕ ನ್ಯಾಯಾಧೀಶರು ಸೂಚಿಸಿದ್ದಾರೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಂಚಾಟೆ ಸಂಜೀವಕುಮಾರ್ ಹೇಳಿದರು.

ನಗರದ ನ್ಯಾಯಾಲಯ ಸಂಕೀರ್ಣ 5 ಎಕರೆ ಜಾಗದಲ್ಲಿದ್ದು, ಜನದಟ್ಟಣೆ ಹಿನ್ನೆಲೆಯಲ್ಲಿ ದಿನೇದಿನೇ ಕಿಷ್ಕಿಂಧೆಯಂತಾಗುತ್ತಿದೆ. ವಾಹನಗಳ ಪಾರ್ಕಿಂಗ್‌ಗೂ ಸಮಸ್ಯೆ ಉಂಟಾಗುತ್ತಿದೆ. ಹಾಗಾಗಿ 10 ರಿಂದ 20 ಎಕರೆ ಜಾಗ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಕೆ.ಅನಿಲ್ ಹೇಳಿದರು.

ತುಮಕೂರು ವಿಶ್ವವಿದ್ಯಾಲಯಕ್ಕೆ 250 ಎಕರೆ ಜಾಗ ನೀಡಲಾಗಿದ್ದು ಈಗಿರುವ ವಿಶ್ವವಿದ್ಯಾಲಯ ಹೊಸ ಜಾಗಕ್ಕೆ ಸ್ಥಳಾಂತರವಾದ ನಂತರ ಆ ಜಾಗವನ್ನು ನ್ಯಾಯಾಲಯಕ್ಕೆ ನೀಡುವಂತೆಯೂ ಸಹ ಮನವಿ ಮಾಡಲಾಗಿದೆ ಎಂದರು. ರಾಜ್ಯ ವಕೀಲರ ಪರಿಷತ್ ಸದಸ್ಯ ಎಂ.ಎನ್.ಮಧುಸೂದನ್, ಜಿಲ್ಲಾ ವಕೀಲರ ಸಂಘದ ಹರಿಕುಮಾರ್, ಕಾರ್ಯದರ್ಶಿ ಬಿ. ಆರ್. ದೇವರಾಜು, ಖಜಾಂಚಿ ಪಾತಣ್ಣ, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.

ವಕೀಲರು ಕೇವಲ ಕೇಸ್ ನಡೆಸುವುದು, ಶುಲ್ಕ ತೆಗೆದುಕೊಳ್ಳುವುದು ಮುಖ್ಯವಲ್ಲ. ಕಕ್ಷಿದಾರರಿಗೆ ನ್ಯಾಯ ಒದಗಿಸುವುದು ಮುಖ್ಯ. ದುಡ್ಡು ಮಾಡುವವರಿಗೆ ಗುರುನೂ ಇಲ್ಲ, ಬಂಧುವೂ ಇಲ್ಲ
ನ್ಯಾ.ಅರವಿಂದಕುಮಾರ್ ಹೈಕೋರ್ಟ್ ನ್ಯಾಯಮೂರ್ತಿ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...