More

    ವಕೀಲರು, ಪೊಲೀಸರ ಮಧ್ಯೆ ಜಟಾಪಟಿ

    ಬೆಳಗಾವಿ: ನಗರದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ನ್ಯಾಯಾಲಯದ ಆವರಣ ಮುಂಭಾಗದಲ್ಲಿ ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ವಕೀಲರು ಮತ್ತು ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು.

    ಪೊಲೀಸ್ ಪೇದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ ವಕೀಲರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಪರಿಣಾಮ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ನಡುವಿನ ರಸ್ತೆ ಮಾರ್ಗದಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು.

    ಬ್ಯಾರಿಕೇಡ್ ಹಾಕಬೇಡಿ: ಮಾರಕ ಕರೊನಾ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಅಳವಡಿಸಲಾಗಿರುವ ಬ್ಯಾರಿಕೇಡ್‌ಗಳನ್ನು ವಕೀಲರ ಸಂಘದ ಅಧ್ಯಕ್ಷ ಎ.ಜಿ. ಮುಳವಾಡವಾಠ ಅವರು ಪೊಲೀಸರಿಂದ ತೆರವುಗೊಳಿಸಿದರು. ನಂತರ ಮಾತನಾಡಿ, ಜಿಲ್ಲಾಧಿಕಾರಿ ಕಚೇರಿ ಆವರಣ ಸಾರ್ವಜನಿಕ ಸ್ಥಳವಾಗಿರುವುದರಿಂದ ಬ್ಯಾರಿಕೇಡ್ ಹಾಕುವ ಅವಶ್ಯಕತೆ ಇಲ್ಲ. ಜಿಲ್ಲಾಧಿಕಾರಿ ಕಚೇರಿ ಎಂದರೆ ಕೇವಲ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಮಾತ್ರ ಸೀಮಿತವಲ್ಲ. ಅಲ್ಲಿ ಸಾರ್ವಜನಿಕರಿಗೆ ಮುಕ್ತ ಪ್ರವೇಶಕ್ಕೆ ಅವಕಾಶವಿರಬೇಕು. ಇದಕ್ಕಾಗಿ ಬ್ಯಾರಿಕೇಡ್ ಹಾಕುವ ಅಗತ್ಯವಿಲ್ಲ ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು.

    ಕ್ಷಮೆ ಕೇಳಿದ ಪೊಲೀಸ್ ಪೇದೆ: ಸ್ಥಳಕ್ಕೆ ಆಗಮಿಸಿದ ಮಾರ್ಕೆಟ್ ಠಾಣೆ ಎಸಿಪಿ ನಾರಾಯಣ ಭರಮಣಿ ಮಾತನಾಡಿ, ರಸ್ತೆ ಸಂಚಾರ ತಡೆಮಾಡಿದ್ದ ವಕೀಲರ ಮನವೊಲಿಸಲು ಯತ್ನಿಸಿದರು. ಆದರೆ, ವಕೀಲರು ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ನಿಂದನೆ ಆರೋಪ ಎದುರಿಸುತ್ತಿದ್ದ ಪೇದೆಯನ್ನು ಸ್ಥಳಕ್ಕೆ ಕರೆಯಿಸಿ ತಪ್ಪಾಯಿತು ಎಂದು ಕ್ಷಮೆಯಾಚಿಸಿದರು.

    ನಂತರ ಪರಿಸ್ಥಿತಿ ತಿಳಿಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts