Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ಲಕ್ಷ್ಮೀ ಹೆಬ್ಬಾಳ್ಕರ್​ ನನ್ನನ್ನು ಅಕ್ಕಾ ಎಂದು ಕರೆದು ಕ್ಷಮೆ ಕೇಳಿದ್ದಾರೆ: ಜಯಮಾಲ

Tuesday, 19.06.2018, 2:29 PM       No Comments

ಬೆಂಗಳೂರು: ಜಯಮಾಲ ಅವರ ಸೇವೆಯನ್ನು ಮೆಚ್ಚಿ ಕಾಂಗ್ರೆಸ್​ ಪಕ್ಷ ಅವರಿಗೆ ಸಚಿವ ಸ್ಥಾನ ನೀಡಿರಬಹುದು ಎಂಬ ಳಿಕೆ ನೀಡಿ ಭಾರಿ ಸುದ್ದಿಯಾಗಿದ್ದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ತಮ್ಮ ಹೇಳಿಕೆ ವಿಚಾರವಾಗಿ ಸಚಿವೆ ಜಯಮಾಲ ಅವರನ್ನು “ಅಕ್ಕಾ” ಎಂದು ಕರೆದು ಕ್ಷಮೆ ಕೇಳಿದ್ದಾರೆ. ಈ ವಿಚಾರವನ್ನು ಸ್ವತಃ ಜಯಮಾಲಾ ಅವರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಜಯಮಾಲ, “ಲಕ್ಷ್ಮೀ ಹೆಬ್ಬಾಳ್ಕರ್ ನನ್ನನ್ನು ಅಕ್ಕಾ ಎಂದು ಕರೆದಿದ್ದಾರೆ. ವಯಸ್ಸಿನಲ್ಲಿ ನಾನು ಅವರಿಗಿಂತ ದೊಡ್ಡವಳು. ಹಾಗಾಗಿ ಅವರು ಬಾಯಿತಪ್ಪಿ ಆಡಿದ ಮಾತಿಗೆ ಕ್ಷಮೆ ಕೇಳಿದ್ದಾರೆ. ಕ್ಷಮೆ ಕೇಳಿದ ಮೇಲೂ ಆ ವಿವಾದವನ್ನು ಮುಂದುವರಿಸುವುದು ಸರಿಯಲ್ಲ ಎಂದು ವಿವಾದಕ್ಕೆ ತೆರೆ ಎಳೆದಿದ್ದಾರೆ.

ಪಕ್ಷದಲ್ಲಿ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಹೆಣ್ಣುಮಕ್ಕಳು ಆಸೆ ಪಡೋದು ಸಹಜ. ಹಾಗಾಗಿ ಸಚಿವ ಸ್ಥಾನಕ್ಕೆ ಅವರೂ ಆಸೆಪಟ್ಟಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಹೆಚ್ಚಿನ ಹೆಣ್ಣುಮಕ್ಕಳಿಗೆ, ಸಚಿವ ಸ್ಥಾನ ಸಿಗಲಿ. ರೂಪಾ ಶಶಿಧರ್ ಕೂಡ ಸಚಿವೆ ಆಗಲಿ ಎಂದು ಹಾರೈಸುತ್ತೇನೆ,” ಎಂದು ಅವರು ಹಾರೈಸಿದರು.

Leave a Reply

Your email address will not be published. Required fields are marked *

Back To Top