More

    ಕೊಳೆತ ಮೊಟ್ಟೆ ಪೂರೈಕೆಯ ರಾಜ್ಯವ್ಯಾಪಿ ತನಿಖೆಗೆ ಆದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

    ಬೆಂಗಳೂರು: ಕೊಳೆತ ಮೊಟ್ಟೆ ಪೂರೈಕೆ ಪತ್ತೆಯಾದ ಸ್ಥಳ ಮಾತ್ರವಲ್ಲದೇ ರಾಜ್ಯವ್ಯಾಪಿ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

    ಇದನ್ನೂ ಓದಿ: ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ

    ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮಗುಣಮಟ್ಟದ ಪೂರೈಕೆಯು ಸರ್ಕಾರದ ಕಾಳಜಿಯಾಗಿದೆ. ಪತ್ತೆಯಾದ ಸ್ಥಳದಲ್ಲಿ ಕ್ತಮವಹಿಸಿದರೆ ಸಾಲದು ಎಂದು ರಾಜ್ಯಮಟ್ಟದ ಅಧಿಕಾರಿಗೆ ತನಿಖೆ ಜವಾಬ್ದಾರಿ ಒಪ್ಪಿಸಿದ್ದು, ವರದಿ ಸಲ್ಲಿಕೆಯಾದ ನಂತರ ಕ್ರಮವಹಿಸುವೆ ಎಂದರು.

    ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸಿದ್ಧವಾಗಿದೆ ಆ್ಯಪ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಈಗಾಗಲೇ ಕಳಪೆ ಮೊಟ್ಟೆಗಳು ಸ್ಥಳಕ್ಕೆ ಸಂಬಂಧಿಸಿದ ಪೂರೈಕೆದಾರರಿಗೆ ನೋಟಿಸ್ ನೀಡಲು ಸೂಚಿಸಲಾಗಿದೆ. ತಾಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಟೆಂಡರ್ ಕರೆದು ಮೊಟ್ಟೆ ಪೂರೈಕೆ ಗುತ್ತಿಗೆ ನೀಡಿರುವ ಕಾರಣ ಆಯಾ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮವಹಿಸಲು ತಿಳಿಸಲಾಗಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

    ಕಾರ್ಪೊರೇಟ್‍ ಲೋಕ ತೊರೆದು ಹೈನುಗಾರಿಕೆ ಶುರು ಮಾಡಿದ ಟೆಕ್ಕಿ ದಂಪತಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts