ಬಿಜೆಪಿ ಉತ್ತರ ಪ್ರದೇಶ ಘಟಕದ ಮಾಜಿ ಅಧ್ಯಕ್ಷ ಮಧ್ಯಪ್ರದೇಶದ ರಾಜ್ಯಪಾಲರಾಗಿ ನೇಮಕ

Madhyapradesh Governer
Published on

ಭೂಪಾಲ್​: ಉತ್ತರ ಪ್ರದೇಶ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಲಕ್ಷ್ಮೀಕಾಂತ್​ ಬಾಜ್​ಪೇಯ್​ ಅವರು ಮಧ್ಯಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕರಾಗಿದ್ದಾರೆ.

69 ವರ್ಷದ ಇವರು ಮೀರತ್​ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಚುನಾಯಿತರಾಗಿದ್ದವರು.

ಮಧ್ಯಪ್ರದೇಶದ ರಾಜ್ಯಪಾಲ ಲಾಲ್​ಜಿ ಟಂಡನ್​ (85) ಇತ್ತೀಚೆಗಷ್ಟೇ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಲಾಲ್​ಜಿ ಟಂಡನ್​ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದಾಗಿನಿಂದಲೂ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್​ ಪಟೇಲ್​ ಅವರೇ ಮಧ್ಯಪ್ರದೇಶದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net