ಬಾವಿಗೆ ಬಿದ್ದ ಚಿರತೆ ರಕ್ಷಣೆ

ಕುಮಟಾ:ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ಕಾರ್ಯಾಚರಣೆ ನಡೆಸಿ ರಕ್ಷಿಸಿದ ಘಟನೆ ತಾಲೂಕಿನ ಕೂಜಳ್ಳಿ ಸನಿಹದ ಮಲ್ಲಾಪುರದ ಮನೆಯೊಂದರಲ್ಲಿ ಭಾನುವಾರ ನಡೆದಿದೆ.
ಚಿರತೆಯೊಂದು ನಾಯಿ ಮರಿಯನ್ನು ಹಿಡಿದು ಹೊತ್ತೊಯ್ಯುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದಿತ್ತು. ಇದನ್ನು ಗಮನಿಸಿದ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ವನ್ಯಜೀವಿ ರಕ್ಷಕರಾದ ಪವನ ನಾಯ್ಕ, ಅಶೋಕ ನಾಯ್ಕ, ಮಹೇಶ ನಾಯ್ಕ, ನಾಗರಾಜ ಶೇಟ, ಸಿ.ಆರ್.ನಾಯ್ಕ ತಂಡವೂ ಸ್ಥಳಕ್ಕೆ ಆಗಮಿಸಿ ಅರಣ್ಯ ಸಿಬ್ಬಂದಿ ಸಹಕಾರದಲ್ಲಿ ಚಿರತೆಯನ್ನು ಬಾವಿಯಿಂದ ಸುರಕ್ಷಿತ ಮೇಲೆತ್ತಿ ಬೋನಿಗೆ ಹಾಕಿದ್ದಾರೆ. ಸುಮಾರು ಒಂದೂವರೆ ವರ್ಷದ ಗಂಡು ಚಿರತೆಯಾಗಿದ್ದು ದೂರದ ಅರಣ್ಯಕ್ಕೆ ಸ್ಥಳಾಂತರಿಸಲಾಗಿದೆ. ಕಾರ್ಯಾಚರಣೆಯಲ್ಲಿ ಆರ್‌ಎಫ್‌ಒ ಪ್ರವೀಣಕುಮಾರ ನಾಯಕ, ಡಿಆರ್‌ಎಫ್‌ಒ ರಾಘವೇಂದ್ರ ನಾಯ್ಕ, ಸಿಬ್ಬಂದಿ ಸಂಗಮೇಶ, ಚಿದಂಬರ ಗೌಡ, ರವಿ, ಶಂಕರ, ಕನಕಪ್ಪ ಸದಾನಂದ, ಮಹೇಶ, ಸಂತೋಷ ಇನ್ನಿತರರು ಇದ್ದರು

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…