

ಪುತ್ತೂರು ಗ್ರಾಮಾಂತರ: ವೀರಮಂಗಲದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನರಿಮೊಗರು ಕ್ಲಸ್ಟರ್ ಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ ಕಾರ್ಯಕ್ರಮ ನಡೆಯಿತು. ಮೂಲ ಓದು-ಬರಹ ಮತ್ತು ಸಂಖ್ಯಾಜ್ಞಾನದಲ್ಲಿ ಪ್ರಗತಿ ಸಾಧಿಸದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಮತ್ತು ಸಂತಸದಾಯಕ ಹಾಗೂ ಅನುಭವಾತ್ಮಕ ಕಲಿಕೆಯ ವಾತಾವರಣವನ್ನು ಪ್ರೇರೇಪಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಮಕ್ಕಳ ಕಲಿಕಾ ಹಬ್ಬದಲ್ಲಿ ನರಿಮೊಗರು ಕ್ಲಸ್ಟರ್ ವ್ಯಾಪ್ತಿಯ 11 ಶಾಲೆಗಳ ಒಟ್ಟು 100 ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡರು.
ನರಿಮೊಗರು ಗ್ರಾ.ಪಂ.ಅಧ್ಯಕ್ಷೆ ಹರಿಣಿ ಅವರು ಉದ್ಘಾಟಿಸಿದರು. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ರವಿಚಂದ್ರ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಸಂತ ವೀರಮಂಗಲ ಮತ್ತು ಕಾರ್ಯದರ್ಶಿ ಗೋಪಾಲಕೃಷ್ಣ ಮಾತನಾಡಿದರು.
ಎಸ್‌ಡಿಎಂಸಿ ಉಪಾಧ್ಯಕ್ಷೆ ನವ್ಯ, ಸದಸ್ಯರಾದ ಸುರೇಶ್ ಗಂಡಿ, ರಮೇಶ ಗೌಡ, ಹರೀಶ ಮಣ್ಣಗುಂಡಿ, ಸಂದೀಪ್ ಕಾಂತಿಲ, ಯೋಗೀಶ, ವಿನುತ, ಚಂದ್ರಾವತಿ, ಭವ್ಯಾ, ಅರ್ಚನಾ, ನಳಿನಿ, ರಝಾಕ್, ಸಮೀರ್, ಉಮ್ಮರ್, ಅನುಪಮ, ರಾಜೇಶ್ವರಿ, ರತ್ನಾವತಿ, ಹಿರಿಯ ವಿದ್ಯಾರ್ಥಿ ಸಂಘದ ಫಾರೂಕ್, ಸಲೀಂ, ಗಣೇಶ ಸಾರಕೂಟೆಲು, ಸುರೇಶ್ ಮಾಸ್ಟರ್, ಶಿಕ್ಷಕರಾದ ಶ್ರೀಲತಾ, ಕವಿತಾ, ಹೇಮಾವತಿ, ಸೌಮ್ಯ, ಶಿಲ್ಪರಾಣಿ, ಸವಿತಾ, ಸಂಚನಾ, ಸುಮಿತ್ರಾ ಉಪಸ್ಥಿತರಿದ್ದರು.
ನರಿಮೊಗರು ಕ್ಲಸ್ಟರ್ ಸಿಆರ್‌ಪಿ ಪರಮೇಶ್ವರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಾಲಾ ಮುಖ್ಯಶಿಕ್ಷಕ ತಾರಾನಾಥ ಸವಣೂರು ಸ್ವಾಗತಿಸಿದರು. ಹರಿಣಾಕ್ಷಿ ವಂದಿಸಿದರು. ಶೋಭಾ ಕಾರ್ಯಕ್ರಮ ನಿರೂಪಿಸಿದರು.
ಕಲಿಕಾ ಹಬ್ಬದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಚರಣ್ ಕುಮಾರ್ ಮುಕ್ವೆ, ಅನಂತ ಭಕ್ತಕೋಡಿ, ದೇವಪ್ಪ ಇಡ್ಯೊಟ್ಟು, ಬಶೀರ್ ಮುಂಡೂರು, ಸತೀಶ್ ಸರ್ವೆ, ಮಾಲತಿ ಆನಡ್ಕ, ಶೋಭಾ ವೀರಮಂಗಲ ಗಟ್ಟಿ ಓದು, ಕಥೆ ಹೇಳುವುದು, ಕೈಬರಹ ಮತ್ತು ಕ್ಯಾಲಿಗ್ರಾಫಿ, ಸಂತೋಷದಾಯಕ ಗಣಿತ, ಟ್ರೆಷರ್ ಹಂಟ್, ಮೆಮೊರಿ ಪರೀಕ್ಷೆ, ರಸಪ್ರಶ್ನೆ, ಪಾಲಕರು ಮತ್ತು ಮಕ್ಕಳ ಸಹ ಸಂಬಂಧದ ವಲಯ, ಈ ವಲಯಗಳಲ್ಲಿ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಸಂಪನ್ಮೂಲ ವ್ಯಕ್ತಿಗಳನ್ನು ಶಾಲಾ ವತಿಯಿಂದ ಗೌರವಿಸಲಾಯಿತು. ಮಕ್ಕಳ ಚಟುವಟಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಸಮನ್ವಯಾಧಿಕಾರಿ ನವೀನ್ ಸ್ಟೀಪನ್ ವೇಗಸ್, ಶಿಕ್ಷಣ ಸಂಯೋಜಕಿ ಅಮೃತಕಲಾ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ರತ್ನಾವತಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.