blank

ಮಕ್ಕಳ ಬುದ್ಧಿಶಕ್ತಿ ಹೆಚ್ಚಿಸಲು ಕಲಿಕಾ ಹಬ್ಬ ಸಹಕಾರಿ

blank

ಶನಿವಾರಸಂತೆ : ಶಿಕ್ಷಣ ಇಲಾಖೆ ನೂತನ ಕಾರ್ಯಕ್ರಮ ಎಫ್‌ಎಲ್‌ಎನ್ ಆಧಾರಿತ 2024-25ನೇ ಸಾಲಿನ ಶನಿವಾರಸಂತೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಬುಧವಾರ ಶನಿವಾರಸಂತೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಶನಿವಾರಸಂತೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಹರೀಶ್ ಉದ್ಘಾಟಿಸಿದರು. ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ಕಲಿಕಾ ಹಬ್ಬ ಕಾರ್ಯಕ್ರಮದ ಮೂಲಕ ಮಕ್ಕಳ ಬುದ್ಧಿಶಕ್ತಿ ಬೆಳೆಯಲು ಇದು ಸಹಕಾರಿಯಾಗುತ್ತದೆ. ಇದರ ಜತೆಯಲ್ಲಿ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಲು ಇದೊಂದು ಉತ್ತಮ ವೇದಿಕೆಯಾಗುತ್ತದೆ ಎಂದರು.
ಶನಿವಾರಸಂತೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸಿ.ಕೆ.ದಿನೇಶ್ ಮಾತನಾಡಿ, ಮಕ್ಕಳ ಕಲಿಕೆಗಳಿಗೆ ಪೂರಕವಾದ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಶಿಕ್ಷಣ ಇಲಾಖೆ ನೂತನವಾಗಿ ರೂಪಿಸಿರುವ ಎಫ್‌ಎಲ್‌ಎನ್ ಆಧಾರಿತ ಕಾರ್ಯಕ್ರಮದ ಮೂಲಕ ಪ್ರತಿಯೊಂದು ಕ್ಲಸ್ಟರ್ ಹಂತದಲ್ಲಿ ಮಕ್ಕಳ ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳುತ್ತದೆ. ಒಂದರಿಂದ ಐದನೇ ತರಗತಿಯ ವರೆಗಿನ ಶಾಲಾ ಮಕ್ಕಳು ಕಲಿಕಾ ಹಬ್ಬದಲ್ಲಿ ಪಾಲ್ಗೊಳ್ಳುತ್ತಾರೆ. ಕಲಿಕಾ ಹಬ್ಬದಲ್ಲಿ ಮಕ್ಕಳಿಗೆ ಗಣಿತ, ರಶಪ್ರಶ್ನೆ, ಭಾಷಣ, ಕತೆ ಹೇಳುವುದು, ಕತೆ ಕಟ್ಟುವುದು, ಚಿತ್ರಕಲೆ, ಹಸ್ತಾಕ್ಷರ ಮುಂತಾದ ಪ್ರತಿಭೆಗಳಿಗೆ ಸಂಬಂಧ ಪಟ್ಟ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಎಂ.ಎಸ್.ರಾಮಚಂದ್ರ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಶಾಲಾ ಮುಖ್ಯ ಶಿಕ್ಷಕ ವಿಶ್ವನಾಥ್ ವಿವಿಧ ಶಾಲಾ ಮುಖ್ಯಸ್ಥರಾದ ಬಿ.ಟಿ.ಪುಟ್ಟರಾಜು, ಪುಟ್ಟಸ್ವಾಮಿ, ಎಚ್.ಆರ್.ಮಲ್ಲೇಶ್, ಶಾಂತಮ್ಮ, ಶಿಕ್ಷಕಿ ಮಮತಾ, ಎಸ್‌ಡಿಎಂಸಿ ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕ, ಶಿಕ್ಷಕಿಯರು ಹಾಜರಿದ್ದರು. ಕಲಿಕಾ ಹಬ್ಬದಲ್ಲಿ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಬಂದ 110 ಮಕ್ಕಳು ಭಾಗವಹಿಸಿದ್ದರು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…