

ಬೆಳ್ತಂಗಡಿ: ಮಾತೃಭಾಷೆಯಲ್ಲಿ ಹಿಡಿತ ಹೊಂದಿದವರು ಇತರ ಭಾಷೆಗಳನ್ನು ಸರಾಗವಾಗಿ ಕಲಿಯಬಹುದು. ಭಾರತವು ಬಹುಭಾಷಾ ದೇಶವಾಗಿದ್ದು ಎಲ್ಲ ಭಾಷೆಗಳು ಇಲ್ಲಿ ತನ್ನದೇ ಆದ ಪ್ರಾಮುಖ್ಯ ಹೊಂದಿವೆ ಎಂದು ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ(ರಾಜ್ಯ ಪಠ್ಯಕ್ರಮ) ಶಾಲಾ ಶಿಕ್ಷಕ ಸೋಮಶೇಖರ್ ಹೇಳಿದರು.
ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ(ಸಿ.ಬಿ.ಎಸ್.ಇ)ಯಲ್ಲಿ, "ಹಿಂದಿ ದಿವಸ' ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಿಂದ ನೃತ್ಯ, ಕಿರು ಪ್ರಹಸನ, ವೃಂದ ಗಾಯನ ಸಾಂಸತಿಕ ಕಾರ್ಯಕ್ರಮ ನಡೆದವು. ಶಿಕ್ಷಕಿ ಶಾಂಟಿ ಜಾರ್ಜ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಇಶಿತ ಹಾಗೂ ಆನೆಟ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಆಯಿಷಾ ಅಸ್ಮಿನ್ ಸ್ವಾಗತಿಸಿದರು. ವಿದ್ಯಾರ್ಥಿ ಅನಿಶ್ ವಂದಿಸಿದರು.