ಶಿವಮೊಗ್ಗ : ಉರ್ದು ಶಾಲಾ ಮಕ್ಕಳಿಗೆ ಮನೆ ಹಾಗೂ ಶಾಲಾ ವಾತಾವರಣ ಬದಲಾಗಬೇಕು. ಅವರ ಭವಿಷ್ಯದ ದೃಷ್ಟಿಯಿಂದ ಕನ್ನಡ ಕಲಿಸುವ ಪ್ರಯತ್ನವಾಗಬೇಕು. ಮನೆಯಲ್ಲಿ ಕನ್ನಡ ಟಿವಿ ವಾಹಿನಿ ನೋಡುವ, ಕನ್ನಡದಲ್ಲೇ ಮಾತನಾಡುವ ಅವಕಾಶವನ್ನು ಪಾಲಕರು ಕಲ್ಪಿಸಬೇಕು ಎಂದು ನಿವೃತ್ತ ಪ್ರಾಚಾರ್ಯ ಡಾ.ಎಚ್.ಟಿ.ಕೃಷ್ಣಮೂರ್ತಿ ಹೇಳಿದರು.
ಎಂಆರ್‌ಎಸ್ ಬಳಿಯ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಸಾಹಿತ್ಯ ಕಮ್ಮಟ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಮಕ್ಕಳ ಶಿಕ್ಷಣಕ್ಕಾಗಿ ಬಹಳಷ್ಟು ಹಣ ವೆಚ್ಚ ಮಾಡುತ್ತಿದೆ. ಕಲಿಕೆಯ ಮಾಧ್ಯಮ ಉರ್ದು ಆದರೂ ಪರಿಸರದ ಭಾಷೆಯಾದ ಕನ್ನಡ ಕಲಿಯಲು ಆಸಕ್ತಿ ತೋರಬೇಕು ಎಂದರು.
ರಂಗಕರ್ಮಿ ಡಾ.ಜಿ.ಆರ್.ಲವ ಮಾತನಾಡಿ, ಕಥೆ ಎಂದರೆ ತಾನು ಬದುಕುವ ಲೋಕದ ಮರುಸೃಷ್ಟಿಯೂ ಹೌದು. ಲೋಕದ ವ್ಯಾಖ್ಯಾನವು ಹೌದು. ಕಥೆಗಾರನಿಗೆ ಲೋಕವನ್ನು ಪ್ರಜ್ಞೆಯಿಂದ ಗ್ರಹಿಸುವ ಜ್ಞಾನಬೇಕು ಎಂದು ಹೇಳಿದರು.
ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ಹೊಳೆಹೊನ್ನೂರು ಹೋಬಳಿ ಕಸಾಪ ಅಧ್ಯಕ್ಷ ಎಸ್.ಬಿ.ಸಿದ್ದಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಇಮ್ರಾನ್ ಖಾನ್, ಪ್ರಾಥಮಿಕ ಶಾಲೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಮ್ಜದ್ ಖಾನ್, ಪ್ರಭಾರ ಮುಖ್ಯ ಶಿಕ್ಷಕಿ ಖೈರುನ್ನೀಸಾ, ಪ್ರಮುಖರಾದ ಯು.ಕೆ.ರಮೇಶ್, ಬಸವರಾಜು, ದ್ಯಾಮಪ್ಪ, ರುದ್ರೇಶ್, ರಾಜೇಶ್, ಸಂಗಪ್ಪ , ಕೃಷ್ಣಮೂರ್ತಿ ಉಪಸ್ಥಿತರಿದ್ದರು.
ಉರ್ದು ಶಾಲಾ ಮಕ್ಕಳಿಗೆ ಕನ್ನಡ ಕಲಿಕೆ ಅವಶ್ಯ
You Might Also Like
ಮಿತಿ ಮೀರಿ ಮೊಬೈಲ್ ಬಳಸುವುದರಿಂದ ವೃದ್ಧಾಪ್ಯದ ಲಕ್ಷಣ ಚಿಕ್ಕವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತವೆ! ತಜ್ಞರು ಏನು ಹೇಳುತ್ತಾರೆ ಗೊತ್ತಾ?… smartphone
ನವದೆಹಲಿ: ( smartphone ) ಇತ್ತೀಚಿನ ದಿನಗಳಲ್ಲಿ ಚಿಕ್ಕವರು, ಹಿರಿಯರು ಎಂಬ ಭೇದವಿಲ್ಲದೆ ಎಲ್ಲರೂ ಮೊಬೈಲ್…
ಮೊಬೈಲ್ ಹಿಡಿದುಕೊಳ್ಳುವ ಸ್ಟೈಲ್ ನೋಡಿಯೇ ನಿಮ್ಮ ವ್ಯಕ್ತಿತ್ವ ಎಂಥದ್ದು ಅಂತ ಹೇಳಬಹುದು! ಇಲ್ಲಿದೆ ಅಚ್ಚರಿ ಸಂಗತಿ… Personality Facts
Personality Facts : ಸೈಕಾಲಜಿ ಪ್ರಕಾರ ಒಬ್ಬರ ಕ್ರಿಯೆಗಳ ಆಧಾರದ ಮೇಲೆ ಅವರ ವ್ಯಕ್ತಿತ್ವವನ್ನು ನಿರ್ಣಯಿಸಬಹುದು.…
ಬಿಸಿ..ಬಿಸಿ ಚಹಾ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಇಂದೇ ಬಿಟ್ಟು ಬಿಡಿ.. ಹಲ್ಲುಗಳಿಗೆ ಎಷ್ಟು ಹಾನಿಕಾರಕ ಗೊತ್ತಾ? Health Tips
Health Tips: ಬಿಸಿ..ಬಿಸಿ ಚಹಾ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ...ಊಟ ಇಲ್ಲದಿದ್ದರೂ, ತಡವಾದರೂ ಒಂದು…