More

    ರಾಜಕೀಯ ಬಿಟ್ಟು ಕ್ಷೇತ್ರ ಅಭಿವೃದ್ಧಿಗೆ ಸಹಕರಿಸಲಿ

    ಎಚ್.ಡಿ.ಕೋಟೆ: ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ಬಿಟ್ಟು ಸಹಕಾರ ನೀಡಿದರೆ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಹೊಂದಲಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.

    ತಾಲೂಕಿನ ಭೀಮನಹಳ್ಳಿ ಸಮೀಪದ ಮಾಸ್ತಿಗುಡಿ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ನಾಲ್ಕೂವರೆ ಕೋಟಿ ರೂ. ವೆಚ್ಚದಲ್ಲಿ ಆಶ್ರಮ ಶಾಲೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ತಂತ್ರಕ್ಕೆ ಪ್ರತಿ ತಂತ್ರ ರೂಪಿಸುವ ರಾಜಕೀಯ ಕಲಿತಿದ್ದೇನೆ. ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಬಂದ ಸಂದರ್ಭದಲ್ಲಿ ಕೆಲವರು ರಾಜಕೀಯ ನಡೆಸುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಅಂತಹವರಿಗೆ ಅಭಿವೃದ್ಧಿ ಕೆಲಸ ಮಾಡಿಸುವ ಸಾಮರ್ಥ್ಯ ಕೂಡ ಇಲ್ಲ ಎಂದು ಗುಡುಗಿದರು.

    ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ ಎಂದರೆ ಅದು ಕಾಂಗ್ರೆಸ್ ಸರ್ಕಾರ ಹಾಗೂ ನನ್ನ ಪರಿಶ್ರಮದಿಂದ. ಮಾಸ್ತಿಗುಡಿ ಹಾಡಿಯ ಆದಿವಾಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲೆಂದು ಆಶ್ರಮ ಶಾಲೆ ನಿರ್ಮಾಣ ಮಾಡಲಾಗುತ್ತಿದೆ. ಈ ಶಾಲೆಯಲ್ಲಿ ಸುಮಾರು 165 ಮಕ್ಕಳು ವಿದ್ಯಾಭ್ಯಾಸ ಮಾಡಬಹುದಾಗಿದ್ದು, ದ್ವಿತೀಯ ಪಿಯುಸಿವರೆಗೆ ವಸತಿ ಸಹಿತ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.

    ಒಂದು ವರ್ಷದೊಳಗೆ ಆಶ್ರಮ ಶಾಲೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಈ ಭಾಗದ ಆದಿವಾಸಿ ಮಕ್ಕಳಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.

    ಪರಿಶಿಷ್ಟ ಪಂಗಡದ ಕಲ್ಯಾಣಾಧಿಕಾರಿ ಮಹೇಶ್, ಪೊಲೀಸ್ ಇನ್‌ಸ್ಪೆಕ್ಟರ್ ಶಬೀರ್ ಹುಸೇನ್, ಗಿರಿಜನ ವಿಸ್ತರಣಾಧಿಕಾರಿ ನಾಗರಾಜು, ಮುಖಂಡರಾದ ಸತೀಶ್, ರಾಮಣ್ಣ, ವೀರೇಗೌಡ, ಮನು, ವಿಜಯ್ ಕುಮಾರ್, ವಡ್ಡರಗುಡಿ ಚಿಕ್ಕಣ್ಣ, ಪ್ರದೀಪ್, ಚಿಕ್ಕ, ಮಂಜುನಾಥ್, ಗೇಟ್ ಸ್ವಾಮಿ, ನೀಲಪ್ಪ, ಮನೋ ಜಗನ್ನಾಥ್, ನಂಜಯ್ಯ, ಚೆಲುವರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts